ಲೋಕಾಯುಕ್ತ ಪೊಲೀಸರ ಜನಸಂಪರ್ಕಸಭೆ ಇಂದು
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸರು ಮೇ 30ರಂದು ಗುರುವಾರ ಬೆಳಗ್ಗೆ 11ಗಂಟೆಗೆ ದೊಡ್ಡಬಳ್ಳಾಪುರ ನಗರದ ಪರಿವೀಕ್ಷಣಾ ಮಂದಿರ (ಪ್ರವಾಸಿ ಮಂದಿರ) ಸಭಾಂಗಣದಲ್ಲಿ ಜನ ಸಂಪರ್ಕ ಸಭೆ ನಡೆಸಲಿದ್ದಾರೆ. ಸಾರ್ವಜನಿಕರ ಕುಂದುಕೊರತೆಗಳನ್ನು ಅಲಿಸುವುದು ಮತ್ತು ದೂರುಗಳನ್ನು ಸ್ವೀಕರಿಸುವ ಸಲುವಾಗಿ ಸಭೆ ನಡೆಯುತ್ತಿದ್ದು, ತಾಲೂಕು ಮಟ್ಟದ ಇಲಾಖಾ ಅಧಿಕಾರಿಗಳು ಖುದ್ದು ಹಾಜರಾಗಲು ಮತ್ತು ಸಾರ್ವಜನಿಕರು ಇದರ ಉಪಯೋಗ ಪಡೆಯಲು ಕೋರಲಾಗಿದೆ.