ವಿದ್ಯುತ್ ಶಾರ್ಟ್ ಸರ್ಕೀಟ್ ಲಕ್ಷಾಂತರ ರುಪಾಯಿ ನಷ್ಟ
ಕನಕಪುರ: ಕನಕಪುರ ಟೌನ್ ರಾಮನಗರ ರಸ್ತೆಯಲ್ಲಿರುವ ನೂರ್ ಬೆಡ್ಡಿಂಗ್ ಹೌಸ್ನಲ್ಲಿ ವಿದ್ಯುತ್ ಷಾರ್ಟ್ ಸರ್ಕೀಟ್ ನಿಂದಾಗಿ ಬೆಂಕಿ ಆಕಸ್ಮಿಕ ಸಂಭವಿಸಿ ಲಕ್ಷಾಂತರ ರು.ಗಳ ನಷ್ಟ ಉಂಟಾಗಿದೆ.
ಇಲ್ಲಿನ ಮುನಾವರ್ ಎಂಬುವವರ ಮಾಲೀಕತ್ವದ ಬೆಡ್ಡಿಂಗ್ ಹೌಸ್ನಲ್ಲಿ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಂಗಡಿಯಲ್ಲಿನ ಸಿಬ್ಬಂದಿ ತಕ್ಷಣವೇ ಅಗ್ನಿಶಾಮಕದಳಕ್ಕೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಗ್ನಿ ಅವಘಡದಲ್ಲಿ ಸುಮಾರು ಐದು ಲಕ್ಷ ರು.ಗಳ ನಷ್ಟ ಉಂಟಾಗಿದೆ ಎಂದು ಮಾಲೀಕ ಮುನಾವರ್ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕನಕಪುರ ಠಾಣೆಯಲ್ಲಿ ದೂರು ದಾಖಲಾಗಿದೆ.