ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

'ಖಾಸಗಿಗಿಂತ ಸರ್ಕಾರಿ ಶಾಲೆಯೇ ಉತ್ತಮ'

Rashmi Kasaragodu
Updated On : 1 Jun 2013, 12:43 pm

ಸೂಲಿಬೆಲೆ: ಖಾಸಗಿ ಶಾಲೆಗಳಿಗಿಂತ ಕನ್ನಡ ಸರ್ಕಾರಿ ಶಾಲೆಗಳು ಶೈಕ್ಷಣವಾಗಿ ಹೆಚ್ಚು ಪ್ರಗತಿ ಕಾಣುತ್ತಿದ್ದು,ಮಕ್ಕಳಿಗೆ ಗುಣಾತ್ಮಕವಾಗಿ ಉತ್ತಮ ಶಿಕ್ಷಣ ಸಿಗುತ್ತಿದೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ವೈ ನಾಗರಾಜ್ ತಿಳಿಸಿದ್ದಾರೆ.
ಸೂಲಿಬೆಲೆ ಟೌನ್ ಸರ್ಕಾರಿ ಶಾಲೆ ಪ್ರಾರಂಭೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಪಂ ಅಧ್ಯಕ್ಷ ಕೆ.ನಾರಾಯಣಪ್ಪ ಮಾತನಾಡಿ, ಸರ್ಕಾರಿ ಶಾಲೆಗಳ ಪ್ರಗತಿಗೆ ಅನುಗುಣವಾಗಿ ಎಲ್ಲ ರೀತಿಯ ಸಹಕಾರ ಗ್ರಾಪಂದಿಂದ ದೊರಕಿಸಿಕೊಡಲಾಗವುದು. ಮಕ್ಕಳು ಚನ್ನಾಗಿ ಓದಿ ದೇಶವನ್ನು ಮುನ್ನಡಿಸಬೇಕು ಎಂದರು.
ಗ್ರಾಪಂ ಸದಸ್ಯ ಶಿವಣ್ಣ, ಎಸ್.ಕೆ ರಾಘವೇಂದ್ರ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕೆ ಶಿಕ್ಷಕರು ಹೆಚ್ಚು ಶ್ರಮವಹಿಸಿ ದುಡಿಯಬೇಕು. ಈ ಶಾಲೆಯ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ ಹಾಗೂ ಮಕ್ಕಳಿಗೆ ಶೂಗಳನ್ನು ಉಚಿತವಾಗಿ ಕೊಡಿಸುವ ಭರವಸೆ ನೀಡಿದರು.  ಮಕ್ಕಳಿಗೆ ಉಚಿತವಾಗಿ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಲಾಯಿತು. ಮುಖಂಡರಾದ ಮುನಿರಾಮಯ್ಯ,ಶ್ರೀನಿವಾಸ್, ಮುನಿಶಾಮಯ್ಯ, ಮುಖ್ಯ ಶಿಕ್ಷಕಿ ಓಂಕಾರಮ್ಮ ಹಲವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement