ನಿವೃತ್ತ ನೌಕರರ ಸಂಘದ ಸರ್ವಸದಸ್ಯರ ಮಹಾಸಭೆ
ಕನಕಪುರ: ಕನಕಪುರ ತಾಲೂಕು ನಿವೃತ್ತ ನೌಕರರ ಸಂಘದ ವಾರ್ಷಿಕ ಸರ್ವಸದಸ್ಯರ ಮಹಾಸಭೆ ಇಲ್ಲಿನ ಮುನಿಸಿಪಲ್ ಹೈಸ್ಕೂಲ್ ರಸ್ತೆಯ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾಧ್ಯಕ್ಷ ಚಂದ್ರಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.
ನಿವೃತ್ತ ನೌಕರರು ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಸರ್ಕಾರ ಒದಗಿಸುತ್ತಿರುವ ಸವಲತ್ತುಗಳು ಹಾಗೂ ಪಿಂಚಣಿ ಸಾಲದಾಗುತ್ತಿದೆ. ನೌಕರರು ಆರ್ಥಿಕ ಸಂಕಷ್ಟವನ್ನು ನೀಗಿಸಿಕೊಳ್ಳಲು ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ಜಿಲ್ಲಾಧ್ಯಕ್ಷ ಚಂದ್ರಪ್ಪ ಕರೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಸಂಘದ ಹಿರಿಯ ಸದಸ್ಯರಾದ ಕರಿಯಪ್ಪ, ನಟರಾಜು, ವೆಂಕಟೇಶ್, ವೀರಭದ್ರಯ್ಯ, ಕೋಡಿಹಳ್ಳಿ ಪುಟ್ಟೇಗೌಡ ಅವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳಾದ
ತೋಪಯ್ಯ, ಶ್ರೀರಂಗರಾಜು, ತಮ್ಮಯ್ಯ ಪಾಲ್ಗೊಂಡಿದ್ದರು.
ಕನಕಪುರ ತಾಲೂಕು ನಿವೃತ್ತ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ನಿವೃತ್ತ ಜಿಲ್ಲಾಖಜಾನಾಧಿಕಾರಿ ಬಿ.ಎಸ್. ನಾಗರಾಜ್, ಕಾರ್ಯದರ್ಶಿಯಾಗಿ ರಂಗರಾಜು, ಖಜಾಂಚಿಯಾಗಿ ಸತ್ಯನಾರಾಯಣ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.