ಬಿಜೆಪಿ ಯುವ ಮೋರ್ಚಾಕ್ಕೆ ಆಯ್ಕೆ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರ ಬಿಜೆಪಿ ಯುವ ಮೋರ್ಚಾ ನೂತನ ಅಧ್ಯಕ್ಷರಾಗಿ ಪಕ್ಷದ ಯುವ
ಕಾರ್ಯಕರ್ತ ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಫುಲ್ ಈ ಆಯ್ಕೆಯ ಆದೇಶ ನೀಡಿದ್ದಾರೆ. ಇಲ್ಲಿನ ಸೋಮೇಶ್ವರ ಬಡಾವಣೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ಮಾಜಿ ಶಾಸಕ ಜೆ.ನರಸಿಂಹಸ್ವಾಮಿ, ನಗರ ಬಿಜೆಪಿ ಅಧ್ಯಕ್ಷ ಎಚ್.ಎಸ್.ಶಿವಶಂಕರ್, ನಗರಸಭಾ ಸದಸ್ಯ ಎ.ನಂಜಪ್ಪ, ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಅಶ್ವತ್ಥನಾರಾಯಣಗೌಡ, ಯುವ ನಿರ್ದೇಶಕ ಧನುಚಂದ್ರ, ಕಲಾವಿದ ಸುರೇಶ್ ಮತ್ತಿತರರು ಅಭಿನಂದಿಸಿದರು.