ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಮೆಗಾ ಪೀಸ್‌ಪೋಸ್ಟರ್ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರಕ್ಕೆ ಬಹುಮಾನ

Rashmi Kasaragodu
Updated On : 10 Nov 2013, 12:37 pm

ದೊಡ್ಡಬಳ್ಳಾಪುರ: ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್ ಮಾರ್ಗದರ್ಶನದಲ್ಲಿ ಲಯನ್ಸ್ ಅಂತಾರಾಷ್ಟ್ರೀಯ ಜಿಲ್ಲೆ-317ಎಫ್ ನೇತೃತ್ವದಲ್ಲಿ ಲಾಲ್‌ಬಾಗ್‌ನ ಮರಿಗೌಡ ಹಾಲ್‌ನಲ್ಲಿ ನಡೆದ ಮೆಗಾ ಪೀಸ್‌ಪೋಸ್ಟರ್ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಲಯನ್ಸ್ ಕ್ಲಬ್ ವತಿಯಿಂದ ಭಾಗವಹಿಸಿದ್ದ 5 ಮಂದಿ ವಿದ್ಯಾರ್ಥಿಗಳಲ್ಲಿ 3 ಮಂದಿ ಬಹುಮಾನಿತರಾದದ್ದು ವಿಶೇಷ. ಸ್ಪರ್ಧೆಯಲ್ಲಿ 1500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳ ಸ್ಪರ್ಧಿಗಳು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ವಿಶ್ವಶಾಂತಿಯ ಸಂದೇಶ ಸಾರುವ ವಿಚಾರಗಳನ್ನು ಪುಟಾಣಿಗಳು ತಮ್ಮ ಕುಂಚದಲ್ಲಿ ಬಿಡಿಸಿದ್ದರು.
ಚಿತ್ರನಟ ರಾಮಕೃಷ್ಣ, ಜಿಲ್ಲಾ ಡಿಜಿ ಪಿಎಂಜೆಎಫ್ ಆರ್.ಕುಮಾರ್ ಬಹುಮಾನಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಿದರು. ಲಯನ್ಸ್ ಪದಾಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement