ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಆಟದ ಮೈದಾನದಲ್ಲಿ ಕಟ್ಟಡ ವಿರೋಧಿಸಿ ಇಂದು ಪ್ರತಿಭಟನೆ

Srinivasa Murthy VN
Updated On : 13 Nov 2013, 1:18 am

ಸೂಲಿಬೆಲೆ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆಟದ ಮೈದಾನದಲ್ಲಿ ಪ್ರೌಢಶಾಲೆ ಕಟ್ಟಡ ಕಟ್ಟಲು ಹುನ್ನಾರ ನಡೆಯುತ್ತಿದ್ದು, ಆಟದಂಗಳದಲ್ಲಿ ಕಟ್ಟಡಗಳು ನಿರ್ಮಾಣವಾದರೆ ಮಕ್ಕಳ ಆಟಕ್ಕೆ ಮೈದಾನವಿಲ್ಲದಂತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಿವಿಧ ಸಂಘಟನೆಗಳು ನ.13 ರಂದು ಸೂಲಿಬೆಲೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿವೆ.
ಪಟ್ಟಣದ ಮುಖ್ಯ ನಿಲ್ದಾಣದ ಬದಿಯಲ್ಲಿರುವ  ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಕನ್ನಡ ಮತ್ತು ಉರ್ದು ಹಿರಿಯ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಕಳೆದ ಎರಡು ವರ್ಷಗಳಿಂದ ತಾತ್ಕಾಲಿಕವಾಗಿ ಉರ್ದು ಪ್ರೌಡಶಾಲೆ ಸಹ ನಡೆಯುತ್ತಿದೆ. ಈ ಮೈದಾನದಲ್ಲಿ ಉರ್ದು ಪ್ರೌಢಶಾಲೆ ಕಟ್ಟಡ ಕಟ್ಟಲು ಮುಂದಾಗಿದ್ದು, ಇದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಈ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಆಟದಂಗಳದಲ್ಲಿ ಕಟ್ಟಡ ಬೇಡ ಎಂದು ಒತ್ತಾಯಿಸಿ ಸುಮಾರು 8 ಸಂಘಟನೆಗಳ ಪದಾಧಿಕಾರಿಗಳು, ಪೋಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಅಕ್ರಮ ಕಟ್ಟಡ: ಕ್ರಮ ಕೈಗೊಳ್ಳದ ನಗರಸಭೆ
ಚನ್ನಪಟ್ಟಣ:
ಅಂಗನವಾಡಿಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದರೂ, ಈ ಜಾಗವನ್ನು ವಶಕ್ಕೆ ತೆಗೆದುಕೊಳ್ಳಲು ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯ ನಿವಾಸಿ ಪ್ರಸಾದ್ ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಹಿಂದೆ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು, ಆದರೆ ಅಂದಿನಿಂದಲೂ ಆ ಜಾಗವನ್ನು ವಶಕ್ಕೆ ತೆಗೆದುಕೊಳ್ಳಲು ತಾಲೂಕು ಆಡಳಿತವಾಗಲಿ, ನಗರಸಭೆಯಾಗಲಿ ಮುಂದಾಗಿಲ್ಲ ಎಂದು ಆರೋಪಿಸಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಜಾಗವನ್ನು ಸುಪರ್ದಿಗೆ ಪಡೆದುಕೊಂಡು ಕಾಂಪೌಂಡ್ ನಿರ್ಮಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement