ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಹೆಚ್ಚಿನ ಕಾಳಜಿ ವಹಿಸಲಿ: ನಟರಾಜ್

Vishwanath S
Updated On : 16 Nov 2013, 1:01 am

ಸೂಲಿಬೆಲೆ: ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಬಳಿಸಿಕೊಂಡು ವಿದ್ಯಾರ್ಥಿಗಳು ಕಲಿಕೆಯತ್ತ ಹೆಚ್ಚಿನ ಕಾಳಜಿಯನ್ನು ವಹಿಸಬೇಕು. ಶಿಕ್ಷಕರು ಫಲಿತಾಂಶ ಸುಧಾರಣೆಗೆ ಶ್ರಮಿಸಬೇಕು ಎಂದು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಡಾ.ಎಚ್. ನಟರಾಜ್ ಹೇಳಿದ್ದಾರೆ.
ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ರೂಪಿಸಿರುವ ಹಕ್ಕುಗಳನ್ನು ಸಮರ್ಪಕವಾಗಿ ಜಾರಿ ಮಾಡಿ ಅವರ ಪೂರಕ ಬೆಳವಣಿಗೆಗೆ ಸಹಕಾರಿಯಾಗಬೇಕು. ವಿದ್ಯೆ ಕಲಿತು ಸಮಾಜದ ಬದಲಾವಣಿಗೆ ವಿದ್ಯಾರ್ಥಿಗಳು ಕಾರಣರಾಗಬೇಕು. 2013-14 ನೇ ಸಾಲಿಗೆ  ಗುಣಮಟ್ಟದ ಫಲಿತಾಂಶವನ್ನು ತಂದು ಇಲಾಖೆ ಮತ್ತು ಸಂಸ್ಥೆಗೆ ಉತ್ತಮ ಹೆಸರು ತರಬೇಕು ಎಂದು ಹೇಳಿದರು. ಪ್ರೌಢಶಾಲೆ ಕ್ರೀಡಾಕೂಟದಲ್ಲಿ ಉದ್ದ ಜಿಗಿತ ಸ್ವರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಕುಮಾರಿ ರಶ್ಮಿ, ಹಾಗೂ ಪ್ರಾಥಮಿಕ ಶಾಲಾ  ವಿಭಾಗದಿಂದ ಯೋಗಾಸನ ಸ್ವರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಭಾವನಾ ಅವರನ್ನು ಅಭಿನಂದಿಸಿದರು. ಇದೇ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಣೆ ಮಾಡಿದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ಹೇಮಲತಾ, ಜಿಲ್ಲಾ ಸಮಾಜ ಕಲ್ಯಾಣ ಸಂಘದ ಉಪಾಧ್ಯಕ್ಷ ಸುಬ್ರಹ್ಮಣಿ ಸೇರಿದಂತೆ ಪ್ರಾಂಶುಪಾಲರು, ಶಿಕ್ಷಕರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement