ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕಾಂಗ್ರೆಸ್‌ನಿಂದ ಜಾತಿ ನಡುವೆ ವಿಷ ಬೀಜ

Vishwanath S
Updated On : 16 Nov 2013, 1:00 am

ನೆಲಮಂಗಲ:  ಜಾತಿ ಧರ್ಮಗಳ ನಡುವೆ ವಿಷ ಬೀಜ ಬಿತ್ತಿರುವುದು ಕಾಂಗ್ರೆಸ್ ಪಕ್ಷ ಎಂದು ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಆರೋಪಿಸಿದರು.
ಅವರು ಪಟ್ಟಣದಲ್ಲಿ ಶುಕ್ರವಾರ ಭಾರತ ಗೆಲ್ಲಿಸಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡುತ್ತಾ ಕಳೆದ 9 ವರ್ಷಗಳಿಂದ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಬೇಸತ್ತಿರುವ ದೇಶದ
ಜನತೆಗೆ ಉತ್ತಮ ನೇತಾರನ ಆಯ್ಕೆಯಾಗಬೇಕೆಂಬ ಮಹದಾಸೆ ಹೊಂದಿದ್ದಾರೆ.  ನರೇಂದ್ರಮೋದಿ ಉತ್ತಮ ಆಡಳಿತ ನೀಡುವಂತಹ ಸಮರ್ಥ ನಾಯಕರು. ಅವರು ಭಾನುವಾರದಂದು ನಮ್ಮನ್ನೆಲ್ಲಾ ಉದ್ದೇಶಿಸಿ ಮಾತನಾಡಲಿರುವ ಭಾರತ ಗೆಲ್ಲಿಸಿ ಕಾರ್ಯಕ್ರಮಕ್ಕೆ ಜಿಲ್ಲಾದ್ಯಂತ ಸಾವಿರಾರು ಜನ ತೆರಳುತ್ತಿರುವುದಾಗಿ ತಿಳಿಸಿದರು.
ಮುಂಬರುವ ಲೋಕಸಭಾ ಚುನಾವಣೆಯೊಳಗೆ ಬಿಜೆಪಿಯಲ್ಲಿ ಕೆಜೆಪಿ ವಿಲೀನವಾಗುತ್ತದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಮ್ಮ ನಾಯಕರು. ಅವರು ಶೀಘ್ರವೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಾರೆ ಎಂದು ಹೇಳಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸಲು ಪಟ್ಟಣದಾದ್ಯಂತ ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ, ಮಾಜಿ ಶಾಸಕ ಎಂ.ವಿ.ನಾಗರಾಜು ನೇತೃತ್ವದಲ್ಲಿ  ಮೆರವಣಿಗೆ ನಡೆಯಿತು.
ನೆ.ಯೋ.ಪ್ರಾ ಮಾಜಿ ಅಧ್ಯಕ್ಷ ಎಸ್.ಮಲ್ಲಯ್ಯ, ಕೆ.ಪಿ.ಆನಂದ್, ಪುರಸಭಾ ಸದಸ್ಯ ಕೇಶವಮೂರ್ತಿ, ಮುಖಂಡರಾದ  ಬೈರೇಗೌಡ, ಬಾಳೇಕಾಯಿ ನಾಗರಾಜು, ಸೌಮ್ಯ, ತಾಲೂಕು ಬಿಜೆಪಿ ಅಧ್ಯಕ್ಷ ಜಗದೀಶ್ ಪ್ರಸಾದ್ ಸೇರಿದಂತೆ ನೂರಾರು ಜನ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement