ಭಾರತ ಗೆಲ್ಲಿಸಿ ಸಮಾವೇಶಕ್ಕೆ ಬಿಜೆಪಿಯಿಂದ ಬಸ್ ವ್ಯವಸ್ಥೆ
ದೊಡ್ಡಬಳ್ಳಾಪುರ: ಬೆಂಗಳೂರಿನ ಅರಮನೆ ಮೈದಾನದಲ್ಲಿ ನ.17ರ ಭಾನುವಾರ ನಡೆಯಲಿರುವ ಭಾರತ ಗೆಲ್ಲಿಸಿ.. ನರೇಂದ್ರಮೋದಿ ಅವರ ಬೃಹತ್ ಸಮಾವೇಶಕ್ಕೆ ದೊಡ್ಡಬಳ್ಳಾಪುರದಿಂದ ತೆರಳಲು ಅಗತ್ಯ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಾಲೂಕು ಬಿಜೆಪಿ ತಿಳಿಸಿದೆ.
ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ನೇತೃತ್ವದಲ್ಲಿ ಇಲ್ಲಿನ ಪಕ್ಷದ ಕಚೇರಿಯಲ್ಲಿ ಸಮಾವೇಶದ ಪಾಸುಗಳನ್ನು ಕಾರ್ಯಕರ್ತರಿಗೆ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನರೇಂದ್ರಮೋದಿ ಭವಿಷ್ಯದ ಪ್ರಧಾನಿ. ಸದ್ಯದ ಭಾರತಕ್ಕೆ ಮೋದಿ ನಾಯಕತ್ವ ಅಗತ್ಯವಾಗಿ ಬೇಕಿದೆ. ಈ ನಿಟ್ಟಿನಲ್ಲಿ ಜನರೂ ಯೋಚಿಸುತ್ತಿದ್ದಾರೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ಅಶ್ವತ್ಥನಾರಾಯಣಗೌಡ, ನಗರ ಅಧ್ಯಕ್ಷ ಎಚ್.ಎಸ್.ಶಿವಶಂಕರ್ ಮತ್ತಿತರರು ಭಾಗವಹಿಸಿದ್ದರು. ದೊಡ್ಡಬಳ್ಳಾಪುರ ನಗರ ಮತ್ತು ತಾಲೂಕಿನ ವಿವಿಧ ಭಾಗಗಳಿಂದ ಬಸ್ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುವ ವ್ಯವಸ್ಥೆ ಮಾಡಲಾಗಿದೆ.