ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಇಂದು ಕನ್ನಡ ರಾಜ್ಯೋತ್ಸವ

Srinivasa Murthy VN
Updated On : 22 Nov 2013, 12:14 pm

ವಿಜಯಪುರ: ಪಟ್ಟಣ ಸಮೀಪದ ಬೆಟ್ಟಕೋಟೆ ಗ್ರಾಮದಲ್ಲಿ ನ.22ರಂದು ಶ್ರೀ ರಾಮಕೃಷ್ಣ  ಗ್ರಾಮಾಂತರ ಪ್ರೌಢಶಾಲೆ ಆವರಣದಲ್ಲಿ ಬೆಳಗ್ಗೆ 10 ಗಂಟೆಗೆ 1992-93ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಅಂತರ್ ಪ್ರೌಢಶಾಲಾ ಚರ್ಚಾ ಸ್ಪರ್ಧೆ ಮತ್ತು ಜಾನಪದ ಗೀತೆ ಸ್ಪರ್ಧೆ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಶಾಸಕ ಪಿಳ್ಳಮುನಿಶ್ಯಾಮಪ್ಪ ಉದ್ಘಾಟಿಸಲಿದ್ದು, ವಿವೇಕಾನಂದ ವಿದ್ಯಾಸಂಸ್ಥೆ ಅಧ್ಯಕ್ಷ ಎನ್. ಕೃಷ್ಣಮೂರ್ತಿ ಅದ್ಯಕ್ಷತೆ ವಹಿಸಲಿದ್ದಾರೆ.
ಉಪಾಧ್ಯಕ್ಷ ಎಂ.ಎಸ್. ನಾರಾಯಣಪ್ಪ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಪಂ ಸದಸ್ಯ ರಾಜಣ್ಣ, ದೇವನಹಳ್ಳಿ ತಾಪಂ ಅದ್ಯಕ್ಷೆ ರಾಧಿಕಾತ್ಯಾಗರಾಜು, ಲೋಕಸಭೆ ಮಾಜಿ ಸದಸ್ಯ ಸಿ. ನಾರಾಯಣಸ್ವಾಮಿ, ತಹಸೀಲ್ದಾರ್ ಸಿ.ಎನ್. ವೆಂಕಟರಾಜು, ವಿಜಯಪುರ ವೃತ್ತ ಆರಕ್ಷಕ ನಿರೀಕ್ಷಕ ಮಹೇಶ್‌ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement