ಕ್ಷುಲಕ ಕಾರಣಕ್ಕಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ
ಮಾಗಡಿ: ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿನಿಯೊಬ್ಬಳು ಚಾಕುವಿನಿಂದ ಕೈ ಕೊಯ್ದುಕೊಂಡು, ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ಕುದೂರಿನ ಅಂತರಗಂಗೆ ಬಳಿ ಇರುವ ಬಿಸಿಎಂ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ.
ದ್ವಿತೀಯ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಬಿಂದು ಬ್ಲೇಡ್‌ನಿಂದ ಎರಡು ಕೈಗಳನ್ನು ಕೊಯ್ದುಕೊಂಡು ನಂತರ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ. ದ್ವಿತೀಯ ಪಿಯುಸಿ ರೂಪಳೊಂದಿಗೆ ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿದಂತೆ ಬಿಂದು ಗಲಾಟೆ ಮಾಡಿಕೊಂಡಿದ್ದಳು. ರೂಪಳ ಸಂಬಂಧಿಕರು ಬಿಂದುಗೆ ಬೆದರಿಕೆ ಹಾಕಿದ ಕಾರಣ ನೊಂದ ವಿದ್ಯಾರ್ಥಿನಿ ಬಿಂದು ಆತ್ಮಹತ್ಯೆಗೆ ಯತ್ನಿಸಿದಳು ಎನ್ನಲಾಗಿದೆ. ಗಾಯಾಳು ಬಿಂದು ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ.
ಭೇಟಿ: ತಾ.ಪಂ. ಅಧ್ಯಕ್ಷ ಜಿ. ಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಾಳು ಬಿಂದುವಿನ ಆರೋಗ್ಯ ವಿಚಾರಿಸಿದರು. ಬಿಸಿಎಂ ಹಾಸ್ಟೆಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಂತಹ ಘಟನೆಗಳು ನಡೆಯಲು ಕಾರಣವಾಗಿದೆ ಎಂದು ಜಿ. ಕೃಷ್ಣ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು.