ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸುಮೋ ಪಲ್ಟಿ: ಮಹಿಳೆ ಸಾವು

Srinivasa Murthy VN
Updated On : 22 Nov 2013, 12:14 pm

ವಿಜಯಪುರ: ಪಟ್ಟಣ ಸಮೀಪದ ಗೊಡ್ಲುಮುದ್ದೇನಹಳ್ಳಿ ಗ್ರಾಮದ ಬಳಿ ರಾತ್ರಿ ಸುಮಾರು 10.30ರ ಸಮಯದಲ್ಲಿ ಟಾಟಾ ಸುಮೋ ಪಲ್ಟಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿ ಚಂದ್ರಕಲಾ ಸುಬ್ರಮಣಿ(36) ಎಂದು ಹೇಳಲಾಗಿದೆ. ರಾತ್ರಿ ಚಿಕ್ಕಬಳ್ಳಾಪುರಕ್ಕೆ ಕುಟುಂಬ ಸಮೇತ ಮದುವೆಗೆ ಹೋಗಿದ್ದು ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಪತಿ ಸುಬ್ರಮಣಿ ವಾಹನ ಚಾಲನೆ ಮಾಡುತ್ತಿದ್ದು, ಎರಡು ಮಕ್ಕಳು ಜೊತೆಯಲ್ಲಿದ್ದರು ಎಂದು ಹೇಳಲಾಗಿದೆ.
ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಚಂದ್ರಕಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕಟಣೆ ದಾಖಲಾಗಿದೆ.
ಠಾಣೆ ವೃತ್ತ ನೀರಿಕ್ಷಕ ಮಹೇಶ್‌ಕುಮಾರ್ ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement