ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕ್ರೀಡೆಯೂ ಕಡ್ಡಾಯವಾಗಲಿ: ಪ್ರಮೀಳಾ

Srinivasa Murthy VN
Updated On : 23 Nov 2013, 1:16 am

ದೊಡ್ಡಬಳ್ಳಾಪುರ: ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡದ ಹೊರತು ಉತ್ತಮ ಕ್ರೀಡಾಪಟುಗಳ ಸೃಷ್ಟಿ ಅಸಾಧ್ಯ. ಕ್ರೀಡೆ ಪಠ್ಯ ಚಟುವಟಿಕೆಯಂತೆ ಕಡ್ಡಾಯ ಪ್ರಕ್ರಿಯೆಯಾಗಬೇಕು ಎಂದು ಏಕಲವ್ಯ ಪ್ರಶಸ್ತಿ ವಿಜೇತ ಅಂತಾರಾಷ್ಟ್ರೀಯ ಕ್ರೀಡಾಪಟು ಪ್ರಮೀಳಾ ಅಯ್ಯಪ್ಪ ಹೇಳಿದರು.
ಇಲ್ಲಿನ ಶ್ರೀ ದೇವರಾಜ ಅರಸ್ ಅಂತಾರಾಷ್ಟ್ರೀಯ ವಸತಿ ಶಾಲೆಯ ಮೈದಾನದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟದಲ್ಲಿ ಅವರು ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದರು.
ಇಂದು ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚಿನ ಗುಣಮಟ್ಟದ ಕ್ರೀಡಾ ಪ್ರತಿಭೆಗಳನ್ನು ಕಾಣುತ್ತಿದ್ದೇವೆ. ಆದರೆ ನಿರ್ದಿಷ್ಟ ಮಾರ್ಗದರ್ಶನ ಮತ್ತು ಅವಕಾಶಗಳ ಕೊರತೆಯಿಂದ ಎಷ್ಟೋ ಪ್ರತಿಭಾವಂತ ಕ್ರೀಡಾಪಟುಗಳು ಮುಖ್ಯವಾಹಿನಿಗೆ ಬರುತ್ತಿಲ್ಲ. ಸರ್ಕಾರ ವಿಶೇಷ ಸವಲತ್ತುಗಳನ್ನು ನೀಡಿ ಕ್ರೀಡಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಬೇಕು. ಸತತ ಪರಿಶ್ರಮ ಮತ್ತು ಅಭ್ಯಾಸ ಕ್ರೀಡಾ ಪಟುವಿನ ಯಶಸ್ಸಿನ ಗುಟ್ಟು. ಬೌದ್ಧಿಕವಾಗಿ ಮತ್ತು ಶಾರೀರಿಕವಾಗಿ ಆರೋಗ್ಯಪೂರ್ಣ ವ್ಯಕ್ತಿತ್ವ ಹೊಂದಬೇಕಾದರೆ ಕ್ರೀಡೆಗಳು ಸಹಕಾರಿ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕ್ರೀಡಾ ಸಾಧನೆ ನಿರೀಕ್ಷಿತ ಪ್ರಮಾಣದಲ್ಲಿಲ್ಲ. ಇದಕ್ಕೆ ಕಾರಣ ಇಲ್ಲಿ ಪ್ರತಿಭೆಗಳಿಲ್ಲ ಎಂದಲ್ಲ. ಆದರೆ ಅದಕ್ಕೆ ಸೂಕ್ತ ಅವಕಾಶಗಳ ಕೊರತೆಯೇ ಕಾರಣ ಎಂದರು.
ಸಂಸ್ಥೆಯ ಆಡಳಿತ ನಿರ್ದೇಶಕ ಜೆ. ರಾಜೇಂದ್ರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಂಗಾಧರಯ್ಯ, ಪ್ರಾಂಶುಪಾಲ ದೇವಿಕಾರಾಣಿ, ದೈಹಿಕ ಶಿಕ್ಷಕ ದಾದಾಫೀರ್, ಮಧು, ಲಿಂಗರಾಜು ಮತ್ತಿತರರು ಭಾಗವಹಿಸಿದ್ದರು. ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿ ಗಮನ ಸೆಳೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement