ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಡಿ.15ರಂದು ಗುರುವಂದನೆ ಸಮಾರಂಭ: ಬಚ್ಚೇಗೌಡ

Srinivasa Murthy VN
Updated On : 23 Nov 2013, 1:15 am

ಹೊಸಕೋಟೆ: ಆದಿಚುಂಚನಗಿರಿ ಮಹಾಸಂಸ್ಥಾನದ ಮಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿಯವರ ಗುರುವಂದನೆ ಕಾರ್ಯಕ್ರಮ ಡಿ.15ರಂದು ಚಿಕ್ಕಬಳ್ಳಾಪುರದಲ್ಲಿ ಏರ್ಪಡಿಸಲಾಗಿದೆ ಎಂದು ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ ತಿಳಿಸಿದರು.
ಪಟ್ಟಣದಲ್ಲಿ ಈ ಸಂಬಂಧ ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿ, ಅದೇ ದಿನದಂದು ಬಾಲಗಂಗಾಧರನಾಥ ಸ್ವಾಮೀಜಿಯವರ ಪುಣ್ಯಸ್ಮರಣೆ ಸಹ ನಡೆಯಲಿದ್ದು ತಾಲೂಕಿನಾದ್ಯಂತ ಜನಾಂಗದ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ಸಮಾರಂಭದ ಯಶಸ್ಸಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ತಾಲೂಕು ಕೆಂಪೇಗೌಡ ಒಕ್ಕಲಿಗರ ಸಂಘದ ವತಿಯಿಂದ ಚಿಕ್ಕಬಳ್ಳಾಪುರ ಶಾಖಾ ಮಠಾಧ್ಯಕ್ಷ ಮಂಗಳನಾಥ ಸ್ವಾಮೀಜಿ ಅವರನ್ನು ಸನ್ಮಾನಿಸಲಾಯಿತು. ಬೆಂಗಳೂರು ಹಾಲೂ ಒಕ್ಕೂಟದ ಅಧ್ಯಕ್ಷ ಸಿ. ಮಂಜುನಾಥ್, ತಾಲೂಕು ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತೇಗೌಡ, ಜಂಟಿ ಕಾರ್ಯದರ್ಶಿ ನಂಜುಂಡೇಗೌಡ, ಪದಾಧಿಕಾರಿಗಳು, ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement