ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ: ಸರ್ಕಾರಿ ಜೂ. ಕಾಲೇಜಿನಲ್ಲಿ ಬೈಸಿಕಲ್ ವಿತರಣೆ

Srinivasa Murthy VN
Updated On : 23 Nov 2013, 1:17 am

ದೇವನಹಳ್ಳಿ:  ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಜೂನಿಯರ್ ಕಾಲೇಜಿನ 88 ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ ಸಮಾರಂಭ ಶಾಲಾಭಿವೃದ್ಧಿ ಸಮಿತಿಯಿಂದ ನಡೆಯಿತು.  ಶಾಸಕ ಪಿಳ್ಳಮುನಿಶಾಮಪ್ಪ ಕಾರ್ಯಕ್ರಮ ಉದ್ಘಾಟಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು, ಪ್ರಮುಖವಾಗಿ ಬಿಸಿಯೂಟ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ ಜೊತೆಗೆ ಸೈಕಲ್ ಸಹ ನೀಡುತ್ತಿದ್ದು ವಿದ್ಯಾರ್ಥಿಗಳು ತಮ್ಮ ತಂದೆ ತಾಯಿ ಮತ್ತು ಶಾಲೆಗೆ ಒಳ್ಳೆ ಹೆಸರು ತಂದು ದೇಶದ ಉತ್ತಮ ಪ್ರಜೆಗಳಾಗಬೇಕು ಎಂದರು.  ಶಾಲೆಗೆ ಅಗತ್ಯವಿರುವ ರಂಗಮಂದಿರದ ಮುಂಭಾಗದಲ್ಲಿ ಶೆಲ್ಟರ್ ಮಾಡಿಸಿ ಕೊಡುವುದಾಗಿ ತಿಳಿಸಿದರಲ್ಲದೆ ಶೌಚಾಲಯ ಮತ್ತು ನೀರಿನ ವ್ಯವಸ್ಥೆಗೆ ಪುರಸಭೆ ಅಧಿಕಾರಿಗಳು ಸ್ಪಂದಿಸಲಿದ್ದಾರೆ ಎಂದರು. ತಾಲೂಕು ಜೆಡಿಎಸ್ ಅಧ್ಯಕ್ಷ ಮುನಿಶಾಮಯ್ಯ, ಪುರಸಭಾ ಸದಸ್ಯ ಬೇಕರಿ ಮಂಜುನಾಥ್, ನರಸಿಂಹ ಮೂರ್ತಿ, ಕುಮಾರ್, ಶಶಿಕುಮಾರ್ ಹಾಗೂ ಶಾಲಾಭಿವೃದ್ಧಿ ಸಮತಿ ಸದಸ್ಯರು ಹಾಗೂ ಪುರಸಭಾ ಮುಖ್ಯಾಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು. ಶಿಕ್ಷಕ ಕೆ.ಬಸವರಾಜು ಸ್ವಾಗತಿಸಿದರು. ಉಪ ಪ್ರಾಂಶುಪಾಲೆ ನಾಗರತ್ನಮ್ಮ  ಶಾಲೆಯ ಬೇಡಿಕೆಗಳ ಬಗ್ಗೆ ಶಾಸಕರಿಗೆ ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement