ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಶಾಂತಿ, ನೆಮ್ಮದಿ ನೀಡುವ ಪುಣ್ಯ ಸ್ಥಳವೇ ದೇವಾಲಯ

Srinivasa Murthy VN
Updated On : 23 Nov 2013, 1:15 am

ನೆಲಮಂಗಲ: ಪ್ರತಿಯೊಬ್ಬರಿಗೂ ಶಾಂತಿ, ನೆಮ್ಮದಿ ನೀಡುವ ಪುಣ್ಯ ಸ್ಥಳವೇ ದೇವಾಲಯ ಎಂದು ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಪೀಠಾಧ್ಯಕ್ಷ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ನುಡಿದರು.
ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಆಂಜನೇಯಸ್ವಾಮಿ, ಬಸವಣ್ಣ ದೇವರು, ಮಾರಮ್ಮ ದೇವಾಲಯಗಳ ಉದ್ಘಾಟನಾ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಆಧುನಿಕರಣ ಅನುಸರಿಸುತ್ತಿರುವವರು ದೇವರಲ್ಲಿ ಪ್ರಾರ್ಥನೆ ಸಲ್ಲಿಸುವುದಕ್ಕೂ ಯುವ ಜನತೆ ಸಮಯ ಮೀಸಲಿಡುತ್ತಿಲ್ಲ ಎಂದರು.
ಇಂಧನ ಮತ್ತು ಕಂಪನಿ ವ್ಯವಹಾರಗಳ ಸಚಿವ ಡಾ. ಎಂ. ವೀರಪ್ಪ ಮೊಯ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಇ. ಕೃಷ್ಣಪ್ಪ ಮಾತನಾಡಿದರು.
ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಡಾ. ಶಿವಕುಮಾರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮಿ ಸಾನ್ನಿಧ್ಯ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಶಾಸಕ ಡಾ. ಕೆ. ಶ್ರೀನಿವಾಸಮೂರ್ತಿ, ಜಿ.ಪಂ. ಸದಸ್ಯರಾದ ಬಿ.ಎಂ. ಕಾಂತರಾಜು, ಎಂ.ಎನ್. ರಾಂ, ಜಿಲ್ಲಾಧಿಕಾರಿ ವಿ. ಶಂಕರ್, ತಹಸೀಲ್ದಾರ್ ಡಾ. ಗೀತಾ, ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತೆ ಲಕ್ಷ್ಮಿ, ತಹಸೀಲ್ದಾರ್ ಪದ್ಮ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಪದ್ಮನಾಭ್ ಹಾಗೂ ಆಂಜನೇಯಸ್ವಾಮಿ ದೇವಾಲಯದ ಪದಾಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement