ಇಂದಿನಿಂದ ಸಾಹಿತ್ಯ-ಸಂಸ್ಕೃತಿ ವಿಜ್ಞಾನ ಸಮಾಗಮ
ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಕನ್ನಡ ಸಾಹಿತ್ಯ ಪರಿಷ್ತತಿನ ನೇತೃತ್ವದಲ್ಲಿ ಕನ್ನಡ ಜಾಗೃತ ಪರಿಷತ್ತಿನ ಸಹಯೋಗದಲ್ಲಿ ರಾಜ್ಯೋತ್ಸವ ಮಾಸಾಚರಣೆ ಅಂಗವಾಗಿ ಪ್ರತಿವರ್ಷದಂತೆ ತಾಲೂಕಿನ ವಿವಿಧ ಪ್ರೌಡಶಾಲೆಗಳಲ್ಲಿ ಸಾಹಿತ್ಯ-ಸಂಸ್ಕೃತಿ-ವಿಜ್ಞಾನ ಸಮಾಗಮ-2013 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನ.25ರ ಸೋಮವಾರ ಮಧ್ಯಾಹ್ನ 2 ಗಂಟೆಗೆ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಂ.ಇ.ಖಲೀಲುಲ್ಲಾಖಾನ್ ಉದ್ಘಾಟಿಸಲಿದ್ದು,
ತಾ.ಕಸಾಪ ಅಧ್ಯಕ್ಷ ಕೆ.ಆರ್.ರವಿಕಿರಣ್ ಅಧ್ಯಕ್ಷತೆ ವಹಿಸುವರು. ನಿವೃತ್ತ ಅಧ್ಯಾಪಕ ಬಿ.ಎಲ್.ರಾಮಕೃಷ್ಣ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಹುಲಿಕಲ್ ನಟರಾಜ್, ಕಜಾಪ ಕಾರ್ಯದರ್ಶಿ ತ.ನ.ಪ್ರಭುದೇವ್, ಕಜಾಪ ಮುಖಂಡ ಡಿ.ವಿ.ಅಶ್ವತ್ಥಪ್ಪ, ತಾ.ಕಸಾಪ ಮಾಜಿ ಅಧ್ಯಕ್ಷ ಡಾ.ಬಿ.ನರಸಿಂಹಮೂರ್ತಿ, ಕಾಲೇಜಿನ ಉಪಪ್ರಾಂಶುಪಾಲ ಸುಧೀಂದ್ರನಾಥ್ ಮತ್ತಿತರರು ಭಾಗವಹಿಸಲಿದ್ದಾರೆ.
8 ಶಾಲೆಗಳಲ್ಲಿ ಕಾರ್ಯಕ್ರಮ: ಈ ಬಾರಿ ತಾಲೂಕಿನ 8 ಪ್ರೌಢಶಾಲೆಗಳಲ್ಲಿ ಸಮಾಗಮ ಕಾರ್ಯಕ್ರಮ ಮಾಲಿಕೆ ನಡೆಯುತ್ತಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ಘಾಟನಾ ಕಾರ್ಯಕ್ರಮ, ನಂತರ ನ.26ರಂದು ಮಂಗಳವಾರ ತಾಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ, ನ.27ರ ಬುಧವಾರ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರೌಢಶಾಲೆ ಮತ್ತು ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯಲ್ಲಿ, ನ.28ರಂದು ಗುರುವಾರ ತಾಲೂಕಿನ ಸಕ್ಕರೆಗೊಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ, ನ.29ರಂದು ಶುಕ್ರವಾರ ಕೊಂಗಾಡಿಯಪ್ಪ ಪ್ರೌಢಶಾಲೆ ಮತ್ತು ಸರಸ್ವತಿ ಪ್ರೌಢಶಾಲೆಗಳಲ್ಲಿ ಹಾಗೂ ನ.30ರಂದು ಶನಿವಾರ ಜಿ.ಕೆ.ಪ್ರೌಢಶಾಲೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.