ಇಂದು ಜಿಲ್ಲಾ ಮಟ್ಟದ ಸ್ವಚ್ಛತಾ ಉತ್ಸವ
ರಾಮನಗರ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಯ ಸಂಯುಕ್ತಾಶ್ರಯದಲ್ಲಿ ವಿಶ್ವ ಶೌಚಾಲಯ ದಿನದ ಅಂಗವಾಗಿ ನ.25ರಂದು ನಗರದಲ್ಲಿ ಜಿಲ್ಲಾ ಮಟ್ಟದ ಸ್ವಚ್ಛತಾ ಉತ್ಸವ ನಡೆಯಲಿದೆ. ಬೆಳಗ್ಗೆ 10ಕ್ಕೆ ಜಿಲ್ಲಾ ಕ್ರೀಡಾಂಗಣದಿಂದ ಅಂಬೇಡ್ಕರ್ ಭವನದವರೆಗೆ ಹಮ್ಮಿಕೊಂಡಿರುವ ಸ್ವಚ್ಛತಾ ಅರಿವು ಜಾಥಾಕ್ಕೆ ಜಿ.ಪಂ. ಅಧ್ಯಕ್ಷ ಎಚ್.ಸಿ.ರಾಜು ಚಾಲನೆ ನೀಡುವರು. ಜಿಲ್ಲೆಯ ಎಲ್ಲ ಸ್ಥರದ ಜನಪ್ರತಿನಿಧಿಗಳು, ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಜಾಥಾದಲ್ಲಿ ಪಾಲ್ಗೊಳ್ಳುವರು. ಜಾಥಾ ನಂತರ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 11ಕ್ಕೆ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸುವರು. ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್, ಡಾ.ಎಂ.ವಿ.ವೆಂಕಟೇಶ್ ಭಾಗವಹಿಸುವರು.