ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

'ಯುವಕರು ರಕ್ತದಾನ ಮಾಡಿ ಜೀವ ಉಳಿಸಲಿ'

Srinivasa Murthy VN
Updated On : 26 Nov 2013, 1:22 am

ರಾಮನಗರ: ಯುವಕರು ರಕ್ತದಾನ ಮಾಡುವ ಮೂಲಕ ಸಾವಿನ ದವಡೆಯಲ್ಲಿರುವವರಿಗೆ ಜೀವದಾನ ಮಾಡುವಂತ ಮಹತ್ಕಾರ್ಯಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್. ರಘುನಾಥ್ ಕರೆ ನೀಡಿದರು.
ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕದಿಂದ ನಗರದ ಪಟೇಲ್ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ವಿಜ್ಞಾನ ಮತ್ತು ತಂತ್ರಜ್ಞಾನ ಎಷ್ಟೇ ಪ್ರಗತಿ ಸಾಧಿಸಿದ್ದರೂ ಕೂಡ ಕೃತಕವಾಗಿ ರಕ್ತವನ್ನು ಉತ್ಪಾದನೆ ಮಾಡಲು ಸಾಧ್ಯವಾಗಿಲ್ಲ. ಆದ್ದರಿಂದ ಅಪಘಾತ ಇಲ್ಲವೇ ಇನ್ನಿತರೆ ಕಾಯಿಲೆಯಿಂದ ನರಳುತ್ತಿರುವ ರೋಗಿಗಳಿಗೆ ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವವನ್ನು ಉಳಿಸಬೇಕು ಎಂದರು.  ಇಂದಿನ ದಿನಗಳಲ್ಲಿ ಮಿತಿಮೀರಿದ ವಾಹನ ದಟ್ಟಣೆಯಿಂದ ಪ್ರಯಾಣದ ವೇಳೆ ಅಪಘಾತಗಳು ಸಾಮಾನ್ಯವಾಗಿವೆ. ಗರ್ಭಿಣಿಯರಿಗೆ, ಶಸ್ತ್ರ ಚಿಕಿತ್ಸೆಗೆ ಒಳಪಡುವವರಿಗೆ, ಸೋಂಕು ರೋಗಿಗಳಿಗೆ, ಅಪೌಷ್ಟಿಕತೆಯಿಂದ ನರಳುತ್ತಿರುವವರಿಗೆ ರಕ್ತ ಅನಿವಾರ್ಯವಾಗಿದೆ. ಇಂತಹವರಿಗೆ ಮಾನವೀಯ ದೃಷ್ಟಿಯಿಂದ ರಕ್ತದಾನ ಮಾಡಬೇಕು ಎಂದು ತಿಳಿಸಿದರು.
ಶಿಕ್ಷಣದ ಜತೆಗೆ ಪಠ್ಯೇತರ ಮತ್ತು ಸಮಾಜ ಸೇವಾ ಚಟುವಟಿಕೆಗಳನ್ನು ಮೈಗೂಡಿಸಿಕೊಂಡರೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುತ್ತದೆ. ಪ್ರಶಿಕ್ಷಣಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು ಮೌಲ್ಯಗಳನ್ನು ಅಳವಡಿಸಿಕೊಂಡು ವೃತ್ತಿಯಲ್ಲಿ ಪರಿಣಿತರಾಗುವ ಮೂಲಕ ಯಶಸ್ವಿಯಾಗಬೇಕು ಎಂದಪಟೇಲ್ ನರ್ಸಿಂಗ್ ಕಾಲೇಜಿನ ಆಡಳಿತಾಧಿಕಾರಿ ಎ.ಜೆ.ಸುರೇಶ್ ತಿಳಿಸಿದರು.
ಒಂದು ಯೂನಿಟ್ ರಕ್ತವನ್ನು ವಿಭಜಿಸಿ ನಾಲ್ಕು ಮಂದಿಯ ಜೀವ ಉಳಿಸಬಹುದು. ಯುವ ಜನತೆ ಇಂತಹ ಪುಣ್ಯದ ಕೆಲಸಕ್ಕೆ ಸ್ವಯಂ ಪ್ರೇರಿತ ರಕ್ತದಾನದ ಮೂಲಕ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement