ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

'ಸರ್ಕಾರದಿಂದ ಸಿಗುವ ಸವಲತ್ತು ಬಳಸಿಕೊಳ್ಳಿ'

Srinivasa Murthy VN
Updated On : 26 Nov 2013, 1:22 am

ವಿಜಯಪುರ: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಪರಿಶೀಲನೆ ನಡೆಸಿದ್ದಾಗ ಸಾಕಷ್ಟು ಶಾಲೆಗಳು ಪ್ರಗತಿಯಲ್ಲಿ ಹಿಂದೆ ಉಳಿದಿರುವುದು ಬೆಳಕಿಗೆ ಬಂದಿದೆ. ಇದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಅಥವಾ ಅಲ್ಲಿನ ಶಿಕ್ಷಕರು ನೇರ ಹೊಣೆಗಾರರಾಗುತ್ತಾರೆ ಎಂದು ವೆಂಕಟಾಪುರ ಗ್ರಾಮದ ಹಾಲು ಉತ್ಪಾದಕರ ಸಂಘದ ನಿರ್ದೇಶಕ  ಅಶ್ವತ್ಥನಾರಾಯಣಪ್ಪ ಅಭಿಪ್ರಾಯಪಟ್ಟರು.
ಅವರು ಪಟ್ಟಣದ ಸಮೀಪದ ವೆಂಕಟಾಪುರ ಗ್ರಾಮದ ಹಾಲು ಉತ್ಪಾದಕರ ಸಂಘ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಮೂರು ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನ ಮತ್ತು ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ಇದಕ್ಕೆ ಸಂಬಂಧ ಪಟ್ಟಂತೆ ಸರ್ಕಾರದಿಂದ ಹಾಗೂ ಸಂಘ ಸಂಸ್ಥೆಗಳಿಂದ ಸಿಗುವ ಅನುಕೂಲಗಳನ್ನು ಬಳಸಿಕೊಳ್ಳಬೇಕು ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ ವೀಣಾ ಅವರು ಮಕ್ಕಳ ಶಿಕ್ಷಣಕ್ಕೆ ಸಂಬಂಧ ಪಟ್ಟಂತೆ ಸರ್ಕಾರದಿಂದ ಸಿಗುತ್ತಿರುವ ಸವಲತ್ತುಗಳ ಜೊತೆ ಜೊತೆಗೆ ಸಂಘ ಸಂಸ್ಥೆಗಳು ಕೈ ಜೋಡಿಸುವುದರಿಂದ ಮತ್ತಷ್ಟು ಪ್ರೋತ್ಸಾಹಿಸಿದಂತಾಗುತ್ತದೆ. ಈ  ಉದ್ದೇಶದಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಜಯಪುರ ಘಟಕದ ವತಿಯಿಂದ ನೀರಿನ ಸಮಸ್ಯೆ ನಿವಾರಣೆಗೆಂದು ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಶಾಲೆಗೆ ನೀಡಲಾಗಿದೆ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರಯ್ಯ ಮಾತನಾಡಿ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳನ್ನು ನೇರವಾಗಿ ಮಕ್ಕಳಿಗೆ ಒದಗಿಸುತ್ತಿದ್ದು ಶಿಕ್ಷಕರು ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಬೇಕು. ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಬರುವಂತೆ ಪ್ರೇರಣೆ ನೀಡುತ್ತಿದ್ದು ಶಾಲಾ ಕೊಠಡಿಗಳ ಕೊರತೆನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿಯಾಗಿ 4 ಜನ ಶಿಕ್ಷಕರನ್ನು ಕಾಯಂಗೊಳಿಸಲಾಗಿದೆ ಎಂದರು. ಹಿರಿಯ  ಪಶು ಪರೀಕ್ಷಕ ಶ್ರೀನಿವಾಸ್ ಮಾತನಾಡಿದರು.
ಗ್ರಾ.ಪಂ.ಅಧ್ಯಕ್ಷೆ ಭಾಗ್ಯಮ್ಮ ಸುರೇಶ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಶ್ರೀನಿವಾಸಪ್ಪ, ಕಾರ್ಯದರ್ಶಿ ಮಂಜುನಾಥ್, ಶಿಕ್ಷಕರಾದ ಟಿ.ಗೀತಾ, ವೇಣು ಮಾಧವಿ, ನಾಗಮಣಿ, ಗ್ರಾಮ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement