ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರದಲ್ಲೂ ದಾಳಿ

Rashmi Kasaragodu
Updated On : 27 Nov 2013, 2:04 am

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ನಕಲಿ ವೈದ್ಯರ ಕ್ಲಿನಿಕ್ಗಳ ಮೇಲೆ ಮಂಗಳವಾರ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.  ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿ ಡಾ.ಅಶೋಕ್ ಮತ್ತು ಪ್ರಭಾರ ತಾಲೂಕು ವೈದ್ಯಾಧಿಕಾರಿ ಡಾ.ಶರ್ಮಿಳಾ ಹೆಡೆ ದಾಳಿ ನೇತೃತ್ವ ವಹಿಸಿದ್ದರು.
ಪಟ್ಟಣದ 6 ಖಾಸಗಿ ಕ್ಲಿನಿಕ್ಗಳು ಮತ್ತು ಗ್ರಾಮಾಂತರ ಪ್ರದೇಶ ವ್ಯಾಪ್ತಿಯ 1 ಕ್ಲಿನಿಕ್ ಮೇಲೆ ದಾಳಿ ನಡೆದಿದೆ.
ದಾಳಿ ವೇಳೆ ವೈದ್ಯರ ದಾಖಲೆಗಳನ್ನು ಪರಿಶೀಲಿಸಿ ಎಚ್ಚರಿಕೆ ನೀಡಲಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಮಾಧ್ಯಮಗಳಿಗೆ ತಾಲೂಕು ಆರೋಗ್ಯಾಧಿಕಾರಿಗಳು ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಇದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.
ದಾಳಿ ವೇಳೆ 5 ಕ್ಲಿನಿಕ್ಗಳಲ್ಲಿ ಆಯುರ್ವೇದ ಅಧ್ಯಯನ ಮಾಡಿರುವ ವೈದ್ಯರು ಯುನಾನಿ ಔಷಧಿಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ.
ಈ ನಿಟ್ಟಿನಲ್ಲಿ ಸಂಬಂಧಪಟ್ಟ ವೈದ್ಯರಿಗೆ ಆಯುರ್ವೇದ ಔಷಧಿಗಳನ್ನು ಮಾತ್ರ ನೀಡುವಂತೆ ಎಚ್ಚರಿಕೆ ನೀಡಲಾಗಿದೆ ಎಂದಷ್ಟೇ ದಾಳಿಯ ನೇತೃತ್ವ ವಹಿಸಿದ್ದ ಡಾ.ಅಶೋಕ್ ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement