ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಯುವ ಕಾಂಗ್ರೆಸ್ ಬೂತ್ ಮಟ್ಟದ ಚುನಾವಣೆ ಪ್ರಕ್ರಿಯೆಗೆ ಚಾಲನೆ

Rashmi Kasaragodu
Updated On : 27 Nov 2013, 2:07 am

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರ ಮತ್ತು ತಾಲೂಕು ಮಟ್ಟದ ಕಾಂಗ್ರೆಸ್ ಯುವ ಘಟಕದ ನೇತೃತ್ವದಲ್ಲಿ ಮತಗಟ್ಟೆ ಹಂತದ ಪದಾಧಿಕಾರಿಗಳ ಆಯ್ಕೆ ಚುನಾವಣೆ ಪ್ರಕ್ರಿಯೆಗೆ ಸೋಮೇಶ್ವರ ಬಡಾವಣೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ (ಅಪ್ಪಿ), ಪಕ್ಷವನ್ನು  ತಳಹಂತದಿಂದ ಸಂಘಟಿಸುವ ನಿಟ್ಟಿನಲ್ಲಿ ಮತ್ತು ಮುಂಬರುವ ಲೋಕಸಭಾ ಚುನಾವಣೆ ವೇಳೆಗೆ ಪಕ್ಷವನ್ನು ಮತ್ತಷ್ಟು ಸದೃಢವಾಗಿ ಕಟ್ಟುವ ನಿಟ್ಟಿನಲ್ಲಿ ಯುವಕರ ಸಂಘಟನೆಗೆ ಆದ್ಯತೆ ನೀಡಲಾಗುತ್ತಿದೆ. ತಾಲೂಕಿನ ಎಲ್ಲ ಮತಗಟ್ಟೆಗಳ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಸಂಘಟಿಸಿ ಪದಾಧಿಕಾರಿಗಳ ಆಯ್ಕೆ ನಡೆಸಲಾಗುವುದು ಎಂದು ವಿವರಿಸಿದರು.
5 ಮತ್ತು 6ಕ್ಕೆ ಚುನಾವಣೆ: ಡಿಸೆಂಬರ್ 5 ಮತ್ತು 6 ರಂದು ಚುನಾವಣೆ ನಡೆಯಲಿದ್ದು, ಡಿ.1 ನಾಮಪತ್ರಗಳ ಸಲ್ಲಿಕೆ ನಡೆಯಲಿದೆ. ಈ ಕುರಿತು ಪೂರ್ವಭಾವಿ ಸಭೆ ನ.28ರಂದು ಗುರುವಾರ ಕಾಂಗ್ರೆಸ್ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement