ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

Mainashree
Updated On : 27 Nov 2013, 11:32 am

ರಾಮನಗರ: ವಾರ್ತಾ ಇಲಾಖೆಯು 2013-14ನೇ ಸಾಲಿನ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಪದವೀಧರರಿಂದ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಅರ್ಹತೆ ಸಡಿಲಗೊಳಿಸಲಾಗಿದೆ.  ವೃತ್ತಿ ಕೌಶಲ್ಯ ತರಬೇತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಪತ್ರಿಕೋದ್ಯಮ, ಸಮೂಹ ಸಂವಹನ, ವಿದ್ಯುನ್ಮಾನ ಮಾಧ್ಯಮ ವಿಷಯದಲ್ಲಿ ಪದವಿ, ಸ್ನಾತಕ ಪದವಿ, ಪಿ.ಜಿ. ಡಿಪ್ಲೊಮಾ ಪಡೆದಿರಬೇಕು. ನಿರೂಪಣಾ ಕೌಶಲ್ಯ ತರಬೇತಿಗೆ ಅರ್ಜಿ ಸಲ್ಲಿಸಲು ಪತ್ರಿಕೋದ್ಯಮ ಸೇರಿದಂತೆ ಇತರೆ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯದಾಖಲೆಗಳೊಂದಿಗೆ ನಿರ್ದೇಶಕರು, ವಾರ್ತಾ ಇಲಾಖೆ, ವಾರ್ತಾ ಸೌಧ, ಸಂ.17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು 560001 ಇಲ್ಲಿಗೆ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಇಲಾಖಾ ಅಂತರ್ಜಾಲ ತಾಣದಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement