ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸಂವಿಧಾನದ ಆಶಯದಂತೆ ನಡೆದಾಗ ಸ್ವಾಸ್ಥ್ಯ ಸಮಾಜ ಸಾಧ್ಯ

Mainashree
Updated On : 27 Nov 2013, 11:30 am

ಕ.ಪ್ರ.ವಾರ್ತೆ, ಮಾಗಡಿ, ನ.26
ಸಂವಿಧಾನದ ಆಶಯದಂತೆ ಎಲ್ಲರೂ ನಡೆದಾಗ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಹಿರಿಯ ಸಿ.ಜೆ ನ್ಯಾಯಾಲಯದ ನ್ಯಾಯಾಧೀಶೆ ನಾಗಶ್ರೀ ನುಡಿದರು.
ಅವರು ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ  ಕಾನೂನು ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಸಮಾಜದ ತಳಹದಿಯೇ ಸಂವಿಧಾನಾವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪವಿತ್ರವಾದ ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯ. ಸಂವಿಧಾನಾತ್ಮಕವಾದ ಹಕ್ಕನ್ನು ಪಡೆಯಲು ಎಲ್ಲರಿಗೂ ಸ್ವಾತಂತ್ರ್ಯವಿದೆ. ಸಂವಿಧಾನ ಆಶಯಕ್ಕೆ ವಿರುದ್ಧವಾಗಿ ನಡೆದರೆ ಕಾನೂನಿನಡಿ ಶಿಕ್ಷೆಗೆ ಒಳಗಾಗಬೇಕಾದಿತು.
ಕಾನೂನನ್ನು ಗೌರವಿಸಿ, ಜತೆಗೆ ಜೀವನದಲ್ಲಿ ಪಾಲಿಸಿಕೊಂಡು ಬರಬೇಕು ಎಂದರು.
ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಜಿ.ಪಾಪಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಮನುಷ್ಯ ಹುಟ್ಟಿನಿಂದ ಸಾಯುವವರೆವಿಗೂ ಕಾನೂನಿನ ಚೌಕಟ್ಟಿನಲ್ಲಿಯೇ ಬದುಕಬೇಕು. ಸುಸಜ್ಜಿತ ಸಮಾಜ ಬೆಳೆಯಬೇಕಾದರೆ ಧರ್ಮ ಮತ್ತು ಕಾನೂನು ಅತ್ಯವಶ್ಯಕ ಎಂದರು.
ನ್ಯಾಯಾಧೀಶರಾದ ಎಸ್. ಶ್ಯಾಮಲಾ, ಎನ್.ಡಿ. ಮಾಲಾ, ಸಹಾಯಕ ಸರ್ಕಾರಿ ಅಭಿಯೋಜಕಿ ಕೆ.ಎಸ್. ಲತಾ  ಇತರರು ಕಾನೂನು ಅರಿವು ಕುರಿತು ಮಾತನಾಡಿದರು. ತಾಲೂಕು ವಕೀಲರ ಸಂಘದ ಮಾಜಿ ಅಧ್ಯಕ್ಷ ಡಿ.ಎಚ್. ಮಲ್ಲಿಕಾರ್ಜುನಯ್ಯ,  ತಾಲೂಕು ವಕೀಲರ ಸಂಘದ ಉಪಾಧ್ಯಕ್ಷ ಆರ್. ರಂಗಯ್ಯ, ಕಾರ್ಯದರ್ಶಿ ಮುನಿಸ್ವಾಮಿ ನಾಯಕ್, ರಾಜಯ್ಯ, ಟಿ.ಕೆ. ಹಿರಿಯಣ್ಣ, ಕೆ.ಎಸ್. ಪ್ರಕಾಶ್, ನಾರಾಯಣಸ್ವಾಮಿ,ನರಸಿಂಹಸ್ವಾಮಿ,  ನಾಗರಾಜು, ಚಲುವರಾಜು, ರಾಜು, ಇತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement