ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಮುಕ್ಕೇನಹಳ್ಳಿ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಚಾಲನೆ

Mainashree
Updated On : 28 Nov 2013, 11:32 am

ದೊಡ್ಡಬಳ್ಳಾಪುರ: ತಾಲೂಕಿನ ಮೆಳೇಕೋಟೆ ಗ್ರಾಪಂ ವ್ಯಾಪ್ತಿಯ ಮುಕ್ಕೇನಹಳ್ಳಿ ಗ್ರಾಮದ ಎರಡು ರಸ್ತೆಗಳ ಕಾಂಕ್ರಿಟ್  ಕಾಮಗಾರಿಗೆ ಚಾಲನೆ ನೀಡಲಾಯಿತು. ಗ್ರಾಪಂ ಮೂಲಸೌಕರ್ಯ ಅಭಿವೃದ್ಧಿಗೆ ಒದಗಿಸಲಾಗಿರುವ 1ಕೋಟಿ ಅನಿರ್ಬಂಧಿತ ಅನುದಾನದಡಿ ಕಾಮಗಾರಿ ಕೈಗೆತ್ತುಕೊಳ್ಳಲಾಗಿದ್ದು, ಮೆಳೇಕೋಟೆ ಗ್ರಾಪಂ  ಅಧ್ಯಕ್ಷೆ ಲಕ್ಷ್ಮಮ್ಮ ಗುದ್ದಲಿಪೂಜೆ ನೆರವೇರಿಸಿದರು. ಯೋಜನೆಯಡಿಯಲ್ಲಿ ಗ್ರಾಪಂ ವ್ಯಾಪ್ತಿಯ ಮುಕ್ಕೇನಹಳ್ಳಿಯಲ್ಲಿ ಕಾಂಕ್ರೀಟ್ ರಸ್ತೆಗಳ ನಿರ್ಮಾಣ, ಚೋಗೊಂಡಹಳ್ಳಿಯಲ್ಲಿ ಶಾಲೆ ಅಭಿವೃದ್ಧಿ ಮತ್ತು ಚರಂಡಿ ಕಾಮಗಾರಿ, ಚಿಕ್ಕರಾಯಪ್ಪನಹಳ್ಳಿಯಲ್ಲಿ ಚರಂಡಿ ಕಾಮಗಾರಿ, ದೊಡ್ಡರಾಯಪ್ಪನಹಳ್ಳಿಯಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ, ಚನ್ನಾಪುರ, ಸಾಧುಮಠ ಗ್ರಾಮಗಳಲ್ಲಿ ಶಾಲೆ ಅಭಿವೃದ್ಧಿ, ಸೊಣ್ಣಾಪುರ ಗ್ರಾಮದಲ್ಲಿ ರಸ್ತೆ ನಿರ್ಮಾಣ ಮತ್ತು ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಹಲವು ಕೆಲಸಗಳು ಈ ಯೋಜನೆ ವ್ಯಾಪ್ತಿಗೆ ಸೇರಿವೆ ಎನ್ನಲಾಗಿದೆ. ಗ್ರಾಪಂ ಸದಸ್ಯೆ ಪಾರ್ವತಮ್ಮ, ಮಾಜಿ ಸದಸ್ಯ ಕೃಷ್ಣಮೂರ್ತಿ, ಮುಖಂಡರಾದ ಮುನಿನಾರಾಯಣಪ್ಪ, ಎಸ್.ಮಂಜುನಾಥ್, ಮುಖಂಡರಾದ ಎಂ.ಕೃಷ್ಣಮೂರ್ತಿ, ಹನುಮಂತೇಗೌಡ, ಶಾಂತಮೂರ್ತಿ ಇತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement