ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರ'

Rashmi Kasaragodu
Updated On : 30 Nov 2013, 12:42 pm

ದೇವನಹಳ್ಳಿ: ರಾಜ್ಯ ಸರ್ಕಾರ ರಾಜ್ಯದ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದ್ದು ಕೇವಲ ಸಕ್ಕರೆ ಕಾರ್ಖಾನೆಗಳು ಹಿತ ಕಾಯುತ್ತಿದೆ ಎಂದು ಬಿಜೆಪಿ ಜಿಲ್ಲಾ ಮುಖಂಡ ಕೆ.ನಾಗೇಶ್ ತಿಳಿಸಿ ಕಬ್ಬು ಬೆಳೆಗಾರ ಬಡ ರೈತ  ವಿಠಲ ಅರಬಾವಿ ಆತ್ಮಹತ್ಯೆಗೆ ರಾಜ್ಯದ ಮುಖ್ಯಮಂತ್ರಿಗಳೇ ನೇರ ಕಾರಣರಾಗಿದ್ದಾರೆ ಎಂದು ಆರೋಪಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಇಲ್ಲಿನ ಪ್ರವಾಸಿ ಮಂದಿರದಿಂದ ಮಿನಿ ವಿಧಾನಸೌಧಕ್ಕೆ ಪ್ರತಿ ಭಟನಾ ಮೆರವಣಿಗೆ ನಡೆಸಿ ಬಹಿರಂಗ ಸಭೆ ಆಯೋಜಿಸಿದ್ದರು. ಜಿಲ್ಲಾ ಬಿಜೆಪಿ ಮುಖಂಡ ದೇ.ಸೂ. ನಾಗರಾಜ್ ಮಾತನಾಡಿ ನಮ್ಮ  ರಾಜ್ಯದ ರೈತರು ಹಾಗೂ ಕಬ್ಬು ಬೆಳೆಗಾರರು ತಾವು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಬ್ಯಾಂಕ್ ಹಾಗೂ ಇತರ ಮೂಲಗಳಿಂದ ಪಡೆದ ಸಾಲ ತೀರಿಸಲಾಗದೆ ಆತ್ಮಹತ್ಯಗೆ ಶರಣಾಗುತ್ತಿದ್ದಾರೆ. ಕಾರಣ ಕಾಂಗ್ರೆಸ್ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿರುವುದರಿಂದ ಮುಖ್ಯಮಂತ್ರಿಗಳು ಹಾಗೂ ಸಕ್ಕರೆ ಸಚಿವರು ಕೂಡಲೇ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.ಪ್ರತಿಭಟನಾ ಸಭೆಯಲ್ಲಿ ಪ್ರಮುಖರು ಭಾಗವಹಿಸಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement