ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕಂಬಾಳು ಮಠದ ಸಿದ್ಧಲಿಂಗ ಸ್ವಾಮೀಜಿ ವಿಧಿವಶ

Rashmi Kasaragodu
Updated On : 3 Apr 2014, 1:21 am

ನೆಲಮಂಗಲ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತಾಲೂಕಿನ ಕಂಬಾಳು ಮೂಲ ಸಂಸ್ಥಾನ ಮಠದ ಸಿದ್ಧಲಿಂಗ ಸ್ವಾಮೀಜಿ (84) ಬುಧವಾರ ಮುಂಜಾನೆ ಬಂಡೆ ಮಠದಲ್ಲಿ ನಿಧನರಾಗಿದ್ದಾರೆ.
ಶ್ರೀಗಳು ಮೂಲತಃ ಮಾಗಡಿ ತಾಲೂಕಿನ ಬಂಡೆ ಮಠ ಗ್ರಾಮದವರಾಗಿದ್ದು 48 ವರ್ಷಗಳ ಹಿಂದೆ ಸಂಸ್ಥಾನ ಮಠದ ಶ್ರೀ ಚನ್ನವೀರ ಮಹಾಸ್ವಾಮೀಜಿಯಿಂದ ದೀಕ್ಷೆ ಪಡೆದಿದ್ದರು. ಮಠದ ಉತ್ತರಾಧಿಕಾರಿಯಾಗಿ ಮಠದ ಸಂಪೂರ್ಣ ಜವಾಬ್ದಾರಿ ನಿರ್ವಹಿಸುತ್ತಾ ಅಪಾರ ಭಕ್ತರನ್ನು ಹೊಂದಿದ್ದರು. ಮಠಕ್ಕೆ ಬರುವ ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಿ ಜನಾನುರಾಗಿಯಾಗಿದ್ದರು.
ಮಾಗಡಿ ತಾಲೂಕಿನ ಬಂಡೇಮಠದ ಗ್ರಾಮದ ಶಿವರುದ್ರಮ್ಮ ಮತ್ತು ಬಸಪ್ಪ ದಂಪತಿಯ ಮೂರನೇ ಮಗನಾಗಿ ಜನಿಸಿದ ಶ್ರೀಗಳು, ಬಂಡೇಮಠ ಹಾಗೂ ಸಿದ್ಧಗಂಗಾ ಮಠದಲ್ಲಿ ವಿದ್ಯಾಭ್ಯಾಸ ಪೂರೈಸಿದ್ದರು. 48 ವರ್ಷಗಳ ಹಿಂದೆ ಕಂಬಾಳು ಮಹಾಮಠದ 13ನೇ ಪೀಠಾಧಿಪತಿಯಾಗಿ ನೇಮಕಗೊಂಡಿದ್ದರು. 2 ವರ್ಷದ ಹಿಂದೆ ಮಠದ ಉತ್ತರಾಧಿಕಾರಿಯನ್ನಾಗಿ ಶ್ರೀ ಚನ್ನವೀರ ಮಹಾಸ್ವಾಮೀಜಿ ನೇಮಿಸಿದ್ದರು.
ಶ್ರೀಗಳ ಪಾರ್ಥಿವ ಶರೀರವನ್ನು ಕಂಬಾಳು ಸಂಸ್ಥಾನ ಮಠದ ಆವರಣದಲ್ಲಿ ಭಕ್ತರ ದರ್ಶನಕ್ಕೆ ಇಡಲಾಗಿತ್ತು. ಗುರುವಾರ ಬೆಳಗ್ಗೆ 10 ಗಂಟೆಗೆ ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಶಿವಕುಮಾರ ಮಹಾಸ್ವಾಮೀಜಿ ಹಾಗೂ ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ನೇತೃತ್ವದಲ್ಲಿ ವೀರಶೈವ ವಿಧಿ ವಿಧಾನದ ಮೂಲಕ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಮಠದ ಕಿರಿಯ ಶ್ರೀಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement