ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಪ್ರಭಾಕರ್ ರೆಡ್ಡಿ ಗೆಲವಿಗೆ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಿ: ಶಾಸಕ ಬಾಲಕೃಷ್ಣ

Rashmi Kasaragodu
Updated On : 3 Apr 2014, 1:11 am

ಮಾಗಡಿ: ಜೆಡಿಎಸ್ ಕಾರ್ಯಕರ್ತರು, ಕಾಂಗ್ರೆಸ್ಸಿಗರ ದರ್ಪಕ್ಕೆ ಹೆದರುವುದಿಲ್ಲ, ಕಾಂಗ್ರೆಸ್  ಪಾಳೆಗಾರಿಕೆ ಕ್ಷೇತ್ರದಲ್ಲಿ ನಡೆಯುವುದಿಲ್ಲ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಅವರು ತಾಲೂಕಿನ ಐಯ್ಯಂಡಳ್ಳಿ ಬಳಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜೆಡಿಎಸ್  ಅಭ್ಯರ್ಥಿ ಪ್ರಭಾಕರ್ ರೆಡ್ಡಿ ಗೆಲವಿಗೆ ಎಲ್ಲರೂ ಒಗ್ಗಟ್ಟಿನಿಂದ ದುಡಿಯಿರಿ ಎಂದರು.  ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಳ್ಳಲಿದೆ. ಈಗಾಗಲೇ ಮುಖ್ಯಮಂತ್ರಿ  ಸಿದ್ದರಾಮಯ್ಯ ಮಂಕಾಗಿದ್ದಾರೆ.  ಲೋಕಸಭೆ ಚುನಾವಣೆ ನಂತರ ಸಿಎಂ ಪಟ್ಟ ಅಭದ್ರ ಸ್ಥಿತಿಯಲ್ಲಿದೆ ಎಂದರಲ್ಲದೆ ಜೆಡಿಎಸ್  ಅಭ್ಯರ್ಥಿ ಪ್ರಭಾಕರ್ ರೆಡ್ಡಿ ಹಟಕ್ಕೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಎಚ್‌ಡಿಕೆ ಬಿಟ್ಟುಕೊಟ್ಟಿದ್ದಾರೆ. ತೃತೀಯ ರಂಗ ದೇಶದಲ್ಲಿ ಅಧಿಕಾರ ಹಿಡಿಯಲಿರುವುದರಿಂದ  ಎಚ್‌ಡಿಕೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ಸೇರಿ ತೃತೀಯ ರಂಗ ದೇಶದಲ್ಲಿ ಆಡಳಿತ ಹಿಡಿಯುವುದು ನಿಶ್ಚಿತ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಭವಿಷ್ಯ ನುಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement