ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಅಭಿವೃದ್ಧಿಗಾಗಿ ಕಾಂಗ್ರೆಸ್ಗೆ ಮತ ನೀಡಿ'

Rashmi Kasaragodu
Updated On : 6 Apr 2014, 1:48 am

ಆನೇಕಲ್ಲು: ಕೇಂದ್ರದಲ್ಲಿ ಯುಪಿಎ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿ ಮಾಡುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ಈ ನಿಟ್ಟಿನಲ್ಲಿ ಈ ಬಾರಿಯೂ ಕಾಂಗ್ರೆಸ್ ಗೆಲ್ಲಿಸಿ ಎಂದು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಮನವಿ ಮಾಡಿದರು.
ಬೆಂಗಳೂರು ದಕ್ಷಿಣ ಹೆನ್ನಾಗರದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು. ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಅನ್ನ ಭಾಗ್ಯ, ರೈತರ ಸಾಲ ಮನ್ನಾ ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳ ಮೂಲಕ ಕಾಂಗ್ರೆಸ್ ಬದಲಾವಣೆ ಶೆಕೆ ಪ್ರಾರಂಭಿಸಿದೆ ಎಂದು ಬಣ್ಣಿಸಿದರು. ಬಮೂಲ್ ನಿರ್ದೇಶಕ ಆರ್.ಕೆ.ರಮೇಶ್, ಜಿಪಂ ಸದಸ್ಯ ಕೆ.ಸಿ.ರಾಮಚಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ತಿಮ್ಮಾರೆಡ್ಡಿ , ರಾಜಗೋಪಾಲರೆಡ್ಡಿ, ಹೆನ್ನಾಗರ ಗ್ರಾಪಂ ಅಧ್ಯಕ್ಷ ಆರ್.ಕೆ.ಕೇಶವ, ಎನ್.ಬಿ.ಐ ನಾಗರಾಜು, ಎನ್.ಸೋಮಶೇಖರರೆಡ್ಡಿ  ಮತ್ತಿತರರು ಉಪಸ್ಥಿತರಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement