ಯುವತಿ ಮೇಲೆ ಅತ್ಯಾಚಾರ
ಕೆಜಿಎಫ್: ಯುವತಿಯೊಬ್ಬಳನ್ನು ಅತ್ಯಾಚಾರವೇಸಗಿದ ಘಟನೆ ಬೇತಮಂಗಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿ ಮನೆಯಲ್ಲಿ ಒಂಟಿಯಾಗಿದ್ದನ್ನು ಅರಿತ ನಾಗರಾಜ್ ಎಂಬಾತ, ಮನೆಗೆ ನುಗ್ಗಿ, ಆಕೆಯ ಬಾಯಿಗೆ ಕೈಯಿಂದ ಮುಚ್ಚಿ ಕೊಲೆ ಬೆದರಿಕೆ ಹಾಕಿದ್ದಾನೆ. ಬಳಿಕ ಆಕೆಯ ಮೇಲೆ ಅತ್ಯಾಚಾರವೇಸಗಿ ಪರಾರಿಯಾಗಿದ್ದಾನೆ ಎಂದು ಪೊಲೀಸರಿಗೆ ನೀಡಲಾದ ದೂರಿನಲ್ಲಿ ತಿಳಿಸಲಾಗಿದೆ.
ಟ್ರ್ಯಾಕ್ಟರ್ ಪಲ್ಟಿ: ಚಾಲಕ ಸಾವು
ಕೆಜಿಎಫ್: ಟ್ರಾಕ್ಟರ್ ಪಲ್ಟಿ ಹೋಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ಬೆಳಗ್ಗೆ ಬೇತಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು ಅಯ್ಯಪ್ಪನಹಳ್ಳಿ ಗ್ರಾಮದ ನಿವಾಸಿ ಅನಿಲ್ಕುಮಾರ್(20) ಎಂದು ಗುರುತಿಸಲಾಗಿದೆ. ಅಯ್ಯಪ್ಪನಕೆರೆಯಲ್ಲಿ ಮಣ್ಣು ತುಂಬಿಸಿಕೊಂಡು ಬರುತ್ತಿದ್ದಾಗ ಟ್ರಾಕ್ಟರ್ ಪಲ್ಟಿಯಾಯಿತು. ಬೇತಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತ ವ್ಯಕ್ತಿ
ನೇಣಿಗೆ ಶರಣು
ಪಾಂಡವಪುರ: ಪಟ್ಟಣದ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನೇಣಿಗೆ ಶರಣಾಗಿರುವ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತ ವ್ಯಕ್ತಿಗೆ ಸುಮಾರು 35 ವರ್ಷ ವಯಸ್ಸಿರಬಹುದು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣ ಠಾಣೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.