ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಜೆಡಿಎಸ್‌ಗೆ ಸೇರ್ಪಡೆ

Rashmi Kasaragodu
Updated On : 7 Apr 2014, 1:42 am

ದೇವನಹಳ್ಳಿ: ಇಲ್ಲಿನ ಪ್ರಶಾಂತನಗರದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಜೆಡಿಎಸ್ ಕಚೇರಿಯಲ್ಲಿ  ತಾಲೂಕಿನ ಇತರ ಪಕ್ಷಗಳ ಪ್ರಮುಖರ  ಸೇರ್ಪಡೆ ಸಮಾರಂಭ ಭಾನುವಾರ ಆಯೋಜಿಸಲಾಗಿತ್ತು.
ಚನ್ನಹಳ್ಳಿ ಗ್ರಾಮದ ಬಿಜೆಪಿ ನರಸಿಂಹಗೌಡ, ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ಅಧ್ಯಕ್ಷ ಟಿ.ರವಿ, ಕಾರ್ಯದರ್ಶಿ ಕೃಷ್ಣಮೂರ್ತಿ ಹಾಗೂ ಹಲವಾರು ಕಾರ್ಯಕರ್ತರನ್ನು ಶಾಸಕ ಪಿಳ್ಳಮುನಿಶಾಮಪ್ಪ ಅವರು ಪಕ್ಷಕ್ಕೆ ಬರಮಾಡಿಕೊಂಡರು. ದೇವನಹಳ್ಳಿ ತಾಲೂಕಿನಲ್ಲಿ ಹಿಂದಿಗಿಂತಲೂ ಪಕ್ಷ ಬಲಿಷ್ಠವಾಗಿದ್ದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿರವರನ್ನು ಗೆಲ್ಲಿಸಲೇಬೇಕು ಎಂದರು. ಆರ್.ಎನ್.ಕೃಷ್ಣಮೂರ್ತಿ, ತಾಲೂಕು ಜೆಡಿಎಸ್ ಅಧ್ಯಕ್ಷ ಮುನಿಶಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಕೆಸಿ.ವೆಂಕಟೇಗೌಡ, ಜೆಡಿಎಸ್ ಯುವ ಘಟಕ ಅಧ್ಯಕ್ಷ ದೊಡ್ಡಸಣ್ಣೆ ಮುನಿರಾಜು, ವಿಜಯಪುರ ಘಟಕ ಅಧ್ಯಕ್ಷ ಎಂ.ವೀರಪ್ಪ, ತಾಲೂಕು ಕಾರ್ಯಾಧ್ಯಕ್ಷ ಆರ್. ಮುನೇಗೌಡ, ತಾ. ಸೊಸೈಟಿ ಮಾಜಿ ಅಧ್ಯಕ್ಷ ಬಿ.ಶ್ರೀನಿವಾಸ್, ಜಿಲ್ಲಾ ಪಂ. ಮಾಜಿ ಅಧ್ಯಕ್ಷೆ ಶಾಂತಮ್ಮ ಮದ್ದೂರಪ್ಪ, ಮಹಿಳಾ ಘಟಕ ಅಧ್ಯಕ್ಷೆ ಪದ್ಮಾವತಮ್ಮ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಜಿ.ಎ. ರವೀಂದ್ರ ಸ್ವಾಗತ ಕೋರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement