ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಬಿಜೆಪಿ ಬೃಹತ್ ಬಹಿರಂಗ ಸಭೆ

Rashmi Kasaragodu
Updated On : 7 Apr 2014, 1:45 am

ವಿಜಯಪುರ: ಜಿಲ್ಲೆಯಿಂದ ಜಿಲ್ಲೆಗೆ ಹಾರುವ ಜೆಡಿಎಸ್ ಪಕ್ಷಕ್ಕೆ ಮತ್ತು ದೇಶವನ್ನು ಲೂಟಿ ಹೊಡೆದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಡಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ವಿನಂತಿಸಿದರು.
ಅವರು ಪಟ್ಟಣದ ಗಾಂಧಿಚೌಕದಲ್ಲಿ ಏರ್ಪಡಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಒಳಒಪ್ಪಂದ ಮಾಡಿಕೊಂಡು ಬಿಜೆಪಿ ಸೋಲಿಸಲು ಪ್ರಯತ್ನಿಸುತ್ತಿದ್ದಾರೆ. ಈ ಪಿತೂರಿ ಕೆಲಸಕ್ಕೆ ತಕ್ಕ ಪಾಠ ಕಲಿಸಬೇಕು ಎಂದರು.ಚಿಕ್ಕಬಳ್ಳಾಪುರ ಕ್ಷೇತ್ರದ ಮಣ್ಣಿನ ಮಗನಾದ ನಾನು ಇಲ್ಲಿನ ರೈತ ಕುಟುಂಬದಿಂದ ಬಂದಂತವನಾಗಿದ್ದೇನೆ. ಕ್ಷೇತ್ರದಲ್ಲಿನ ಎಲ್ಲಾ ತರಹದ ಸಮಸ್ಯೆಗಳನ್ನು ಅರಿತುಕೊಂಡಿದ್ದು ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವಂತವನಾಗಿದ್ದೇನೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕ್ಷೇತ್ರ ಅಭಿವೃದ್ದಿಗೆಂದು ಸುಮಾರು 400 ಕೋಟಿಗೂ ಅಧಿಕ ಅನುದಾನ ಬರುವಂತೆ ಮಾಡಿದ್ದೇನೆ. ತಾವೆಲ್ಲ ಬಿಜೆಪಿ ಪಕ್ಷಕ್ಕೆ ಮತನೀಡಿ ಮೋದಿಯವರ ಕೈ ಬಲಪಡಿಸಬೇಕು ಎಂದರು. ಇದೇ ಸಂಧರ್ಭದಲ್ಲಿ ಮಾಜಿ ಶಾಸಕ ಜಿ. ಚಂದ್ರಣ್ಣ ಮಾತನಾಡಿದರು. ಜಿಪಂ ಸದಸ್ಯ ರಾಜಣ್ಣ, ಹಿರಿಯ ಬಿಜೆಪಿ ಮುಖಂಡ ಗೋಪಾಲಗೌಡ, ಮಾಜಿ ತಾಲೂಕು ಅಧ್ಯಕ್ಷ ಹನುಮಂತರಾಯಪ್ಪ, ರಾಮಕೃಷ್ಣ ಹೆಗೆಡೆ, ಓಬಿಸಿ ರಾಮುಭಗವಾನ್, ದಂಡೋರ ಟೌನ್ ಅಧ್ಯಕ್ಷ ವೆಂಕಟೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಶ್, ದೇ.ಸು.ನಾಗರಾಜ್, ರಾಜ್‌ಗೋಪಾಲ್, ಟೌನ್ ಅಧ್ಯಕ್ಷ ಕನಕರಾಜು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement