ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಚುನಾವಣಾಧಿಕಾರಿಗಳಿಂದ ವರದಿ ಕೋರಿದ ಡಿಸಿ

Rashmi Kasaragodu
Updated On : 8 Apr 2014, 10:41 am

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಕ್ಷೇತ್ರ ವ್ಯಾಪ್ತಿಯಲ್ಲಿನ ಮತಗಟ್ಟೆಗಳ  ಮೂಲಭೂತ ಸೌಕರ್ಯಗಳಾದ ರ್ಯಾಂಪ್, ವಿದ್ಯುತ್ ಸಂಪರ್ಕ, ಶೌಚಾಲಯ, ಕುಡಿಯುವ ನೀರಿನ ಸೌಲಭ್ಯ, ಮತಗಟ್ಟೆಗಳಲ್ಲಿ ಎಲ್ಲ ಕಿಟಕಿ ಬಾಗಿಲುಗಳ ಸುಸ್ಥಿತಿ, ಮತ ಚಲಾಯಿಸಲು ಬಂದ ಮತದಾರರಿಗೆ ಸರದಿಯಲ್ಲಿ ನಿಲ್ಲಲು ನೆರಳಿನ ವ್ಯವಸ್ಥೆ, ಮತಗಟ್ಟೆಗಳಿಗೆ ಸರಿಯಾಗಿ ಮತಗಟ್ಟೆ ಸಂಖ್ಯೆ ಮತ್ತು ಹೆಸರು ನಮೂದಿಸಿರುವ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ.ಡಿ.ಎಸ್. ವಿಶ್ವನಾಥ್ ಅವರು ಸಹಾಯಕ ಚುನಾವಣಾಧಿಕಾರಿಗಳಿಂದ ವರದಿ ಕೋರಿದ್ದಾರೆ.
ಏ.17 ರಂದು ನಡೆಯುವ ಚುನಾವಣೆಯ ಸಿದ್ಧತೆಗಳ ಬಗ್ಗೆ ಭಾರತ ಚುನಾವಣಾ ಆಯೋಗವು ಸದ್ಯದಲ್ಲೇ ಸಭೆ ಕರೆಯಲಿದ್ದು, ಕ್ಷೇತ್ರ ವ್ಯಾಪ್ತಿಯ ಪ್ರತಿ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಯಾಗಿ ನೇಮಕಗೊಂಡಿರುವವರು ತಮ್ಮ ವ್ಯಾಪ್ತಿಯ ಸೆಕ್ಟರ್ ಆಫೀಸರ್‌ಗಳಿಂದ ಮತಗಟ್ಟೆವಾರು ಮತಗಟ್ಟೆಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ದಣಢೀಕಣತ ವರದಿಯನ್ನು ಏ.8 ರೊಳಗೆ ಸಲ್ಲಿಸಲು ಸೂಚಿಸಿದ್ದಾರೆ.
ವರದಿಯನ್ನು ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಹಾಗೂ ಮತದಾರರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಚುನಾವಣಾ ಆಯೋಗವು ಅಪೇಕ್ಷಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement