ಮನೆ ಮಗ ಡಿ.ಕೆ.ಸುರೇಶ್ ಬೆಂಬಲಿಸಿ
ರಾಮನಗರ: ನುಡಿದಂತೆ ನಡೆಯುವ ಮನೆ ಮಗ ಡಿ.ಕೆ.ಸುರೇಶ್ ಅವರನ್ನು ಬೆಂಬಲಿಸಿ. ಕೇವಲ ಸುಳ್ಳು ಭರವಸೆಗಳನ್ನು ನೀಡಿಕೊಂಡು ರಾಜಕೀಯ ಗಿಮಿಕ್ ಮಾಡುತ್ತಿರುವ ಹೊರಗಿನ ರಾಜಕಾರಣಿಗಳನ್ನು ತಿರಸ್ಕರಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಮರಿದೇವರು ಕರೆ ನೀಡಿದರು. ಇಲ್ಲಿನ ವಿಜಯನಗರ ಬಡಾವಣೆಯಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಅನ್ಯ ಪಕ್ಷಗಳ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ನಂತರ ಮಾತನಾಡಿದ ಅವರು, ಉಪ ಚುನಾವಣೆಗೆ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸುವ ಮೂಲಕ ಡಿ.ಕೆ.ಸುರೇಶ್ ಅವರು ನುಡಿದಂತೆ ನಡೆಯುತ್ತಿದ್ದಾರೆ ಎಂದು ತಿಳಿಸಿದರು.