ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್‌ಗೆ ಸೇರ್ಪಡೆ

Srinivasa Murthy VN
Updated On : 10 Apr 2014, 2:04 am

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.5 ಸಿದ್ದೇನಾಯಕನಹಳ್ಳಿಯ ಕಾಂಗ್ರೆಸ್ ಮುಖಂಡ ಮುನಿರಾಜು ನೇತೃತ್ವದಲ್ಲಿ 20ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಪಕ್ಷದ ತಾಲೂಕು ಅಧ್ಯಕ್ಷ ಆರ್.ಗೋವಿಂದರಾಜು ಮತ್ತಿತರ ಮುಖಂಡರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಕರ್ತರು, ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ಸ್ಪರ್ಧಿಸಿರುವುದರಿಂದ ಯುವಕರಿಗೆ ಹೊಸ ಸ್ಫೂರ್ತಿ ಬಂದಿದೆ. ಅಭಿವೃದ್ಧಿಯ ಹರಿಕಾರರಾಗಿ ಗುರ್ತಿಸಿಕೊಂಡ ಕುಮಾರಸ್ವಾಮಿ ಈ ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಗೆಲ್ಲಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಜೆಡಿಎಸ್ ಸೇರ್ಪಡೆಗೊಳ್ಳುತ್ತಿರುವುದಾಗಿ ಹೇಳಿದರು. ಪಕ್ಷದ ಜಿಲ್ಲಾ ಮುಖಂಡ ಬಿ.ಮುನೇಗೌಡ, ನಗರ ಅಧ್ಯಕ್ಷ ತ.ನ.ಪ್ರಭುದೇವ್, ನಗರಸಭಾ ಸದಸ್ಯರನೇಕರು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು-ಪದಾಧಿಕಾರಿಗಳು ಹಾಜರಿದ್ದರು.
ರಾಮೇಶ್ವರದಲ್ಲೂ ಸೇರ್ಪಡೆ: ಅದೇ ರೀತಿ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಗ್ರಾಮದ ಮುಖಂಡ, ಎಪಿಎಂಸಿ ಮಾಜಿ ಅಧ್ಯಕ್ಷ ಆರ್.ಎಂ.ವೆಂಕಟರಾಮಯ್ಯ, ಮುಖಂಡರಾದ ಆರ್.ವಿ.ಶ್ರೀನಿವಾಸ್, ಆರ್.ಟಿ.ರಮೇಶ್, ನಾಗರಾಜು, ಚನ್ನಗಿರಿಯಪ್ಪ ಸೇರಿದಂತೆ ಹಲವುಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕುಮಾರಸ್ವಾಮಿ ಅವರ ಗೆಲವಿಗಾಗಿ ಅವಿರತ ಪರಿಶ್ರಮ ವಹಿಸುವ ಉತ್ಸಾಹದೊಂದಿಗೆ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಅವರು ಹೇಳಿದ್ದಾರೆ.ಪಕ್ಷಕ್ಕೆ ಸೇರ್ಪಡೆಗೊಂಡ ಎಲ್ಲ ಮುಖಂಡರನ್ನು ಪಕ್ಷದ ತಾಲೂಕು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದ್ದಾರೆ.

ಜೆಡಿಎಸ್‌ಗೆ ಮತ ನೀಡಿ: ಅನಿತಾ
ರಾಮನಗರ: ಜೆಡಿಎಸ್ ಅಭ್ಯರ್ಥಿ ಪ್ರಭಾಕರರೆಡ್ಡಿ ಪರ ಚಲಾಯಿಸುವ ಒಂದೊಂದು ಮತವೂ ನೇರವಾಗಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೀಡಿದಷ್ಟೇ ಪ್ರಾಮುಖ್ಯವಾಗಲಿದೆ ಎಂದು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.  ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಮಂಗಳವಾರ ಮತಯಾಚನೆ ನಡೆಸಿದ ಅವರು, ಮತದಾರರು ಎದುರಾಳಿ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಡದೆ ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement