ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸಿಎಂ ಬಳಿಗೆ ನಿಯೋಗ ಕರೆದೊಯ್ಯುವೆ: ಸಿಪಿವೈ

Srinivasa Murthy VN
Updated On : 10 Apr 2014, 2:04 am

ಚನ್ನಪಟ್ಟಣ: ಈ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾಜಿ ಶಾಸಕರು ಮತ್ತು ಹಿರಿಯ ರಾಜಕಾರಣಿಗಳ ಜತೆ ಚರ್ಚಿಸಿ  ಚುನಾವಣೆ ಮುಗಿದ ಬಳಿಕ ಮುಖ್ಯಮಂತ್ರಿ ಬಳಿಗೆ ನಿಯೋಗ ಕರೆದೊಯ್ಯುವುದಾಗಿ ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಮಾಜಿ ಶಾಸಕ ಸಾದತ್ ಆಲಿಖಾನ್ ನಿವಾಸಕ್ಕೆ ಭೇಟಿ ನೀಡಿ  ಚುನಾವಣೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಪಕ್ಷದ ಎಲ್ಲಾ ಮುಖಂಡರೊಂದಿಗೆ ಒಗ್ಗೂಡಿ ದುಡಿಯುವುದಾಗಿ ತಿಳಿಸಿದರು.
ರಾಜಕಾರಣದಲ್ಲಿ ಯಾರೂ ಶಾಶ್ವತವಾಗಿ ಶತ್ರುವೂ ಅಲ್ಲ, ಮಿತ್ರನೂ ಅಲ್ಲ, ಆಯಾ ಸಂದರ್ಭಕ್ಕನುಗುಣವಾಗಿ ವರ್ತಿಸ ಬೇಕಾಗುತ್ತದೆ. ಸಾದತ್ ಆಲಿಖಾನ್ ಮತ್ತು ನನ್ನ ನಡುವೆ ಯಾವುದೇ ವೈಷಮ್ಯವಿಲ್ಲ. ಹಿಂದಿನಿಂದಲೂ ನಮ್ಮಿಬ್ಬರ ನಡುವೆ ಒಳ್ಳೆಯ ಬಾಂಧವ್ಯ ಇದೆ ಎಂದು ತಿಳಿಸಿದರು. ಈಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್‌ರನ್ನು ಗೆಲ್ಲಿಸಲು ನಾವೆಲ್ಲ ಶ್ರಮಿಸ ಬೇಕಿದೆ ಎಂದರು. ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಸಿ.ವೀರೇಗೌಡ ಇತರರು ಉಪಸ್ಥಿತರಿದ್ದರು.

ಯೋಗೇಶ್ವರ್‌ಗೆ ಟಿಕೆಟ್ ಕೊಡಿ ಎಂದಿದ್ದೆ
ಕಳೆದ ಚುನಾವಣೆಯಲ್ಲಿ ಯೋಗೇಶ್ವರ್ ಸಮರ್ಥ ಅಭ್ಯರ್ಥಿಯಾಗಿದ್ದು ಅವರಿಗೇ ಟಿಕೆಟ್ ನೀಡುವಂತೆ ಪಕ್ಷದ ವರಿಷ್ಠರಿಗೆ ತಿಳಿಸಿದ್ದೆ. ಆದರೆ ಕಾರಣಾಂತರಗಳಿಂದ ಹೈಕಮ್ಯಾಂಡ್ ನನಗೆ ಟಿಕೆಟ್ ನೀಡಿತು. ಪಕ್ಷದ ಆಜ್ಞೆಯಂತೆ ನಾನು ಸ್ಪರ್ಧೆ ಮಾಡಿದೆ ಎಂದು ಸಾದತ್ ಆಲಿಖಾನ್ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement