ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಮೊಯ್ಲಿಗೆ ಬೆಂಬಲ ಘೋಷಣೆ

Srinivasa Murthy VN
Updated On : 11 Apr 2014, 1:09 am

ನೆಲಮಂಗಲ: ಚಿಕ್ಕಬಳ್ಳಾಪುರದ ಲೋಕಸಭಾ ಕ್ಷೇತ್ರದ ಅಭಿವೃದ್ದಿಗೆ ಹಗಲು-ಇರುಳು ಶ್ರಮಿಸುತ್ತಿರುವ ಹಾಗೂ ಎತ್ತಿನ ಹೊಳೆಯ ನೀರನ್ನು ಬಯಲು ಸೀಮೆಗೆ ಹರಿಸುವ ಯೋಜನೆಯ ಬದ್ಧತೆಯನ್ನು ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿಯವರಿಗೆ ವೀರಶೈವ ಸಮಾಜ ಹಾಗೂ ಭೋವಿ ಸಮಾಜದವರು ಬೆಂಬಲಿಸಲಿದ್ದಾರೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷ ಬಿ.ಎಸ್. ಸಚ್ಚಿದಾನಂದಮೂರ್ತಿ ಹೇಳಿದರು.
ಅವರು ಪಟ್ಟಣದಲ್ಲಿ ಗುರುವಾರ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ ಯುಪಿಎ ಸರ್ಕಾರದಲ್ಲಿ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರಿಗೆ ಅದರಲ್ಲೂ ವಿಶೇಷವಾಗಿ ಎಲ್ಲಾ ವರ್ಗದ ಬಡವರಿಗೆ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ತಂದುಕೊಟ್ಟಿದೆ. ಸಾಧನೆ ಮಾತನಾಡ ಬೇಕೇ ವಿನ ಮಾತನಾಡುವುದೇ ಸಾಧನೆಯಾಗಬಾರದು. ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರಿಗೆ ದಲಿತರಿಗೆ ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ, ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದರು.
ಎತ್ತಿನ ಹೊಳೆಯಿಂದ ಕುಡಿಯುವ ನೀರಿನ ಯೋಜನೆಗಾಗಿ ರೂ.13,000 ಕೋಟಿ ಹಣವನ್ನು 2014-15ನೇ ಆಯವ್ಯಯದಲ್ಲಿ ಮಂಜೂರು ಮಾಡಿ, ಶಂಖುಸ್ಥಾಪನೆ ನೆರವೇರಿಸಿದ್ದಾರೆ. ಭೋವಿ ಸಮಾಜದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಮಂತ್ರಿ ಮಂಡಲದಲ್ಲಿ ಭೋವಿ ಜನಾಂಗಕ್ಕೆ ಕ್ಯಾಬಿನೆಟ್ ಸಚಿವರ ಸ್ಥಾನ ಕಲ್ಪಿಸಿದ್ದಾರೆ ಎಂದರು. ಮುಖಂಡರಾದ ಜಯಶಂಕರ್, ಉಮಾಶಂಕರ್, ಮಹದೇವಯ್ಯ, ಭೋವಿ ಸಂಘದ ಕಾರ್ಯದರ್ಶಿ ಶಿವಶಂಕರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement