ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಆಪ್ ಅಭ್ಯರ್ಥಿ ಪ್ರತಿಭಟನೆ

Srinivasa Murthy VN
Updated On : 18 Apr 2014, 1:38 am

ರಾಮನಗರ: ರಾಮನಗರ ತಾಲೂಕಿನ ಮಾಯಗಾನಹಳ್ಳಿ ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಆಪ್ ಅಭ್ಯರ್ಥಿ ರವಿ ಕೃಷ್ಣಾರೆಡ್ಡಿ ಸಂಗಡಿಗರ ಜತೆಗೂಡಿ ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ರಾಜಾರೋಷವಾಗಿಯೇ ಮತದಾರರಿಗೆ ಹಣ ಹಂಚಿಕೆ ನಡೆಯುತ್ತಿತ್ತು. ಅದನ್ನು ಕ್ಯಾಮೆರಾದಿಂದ ಸೆರೆ ಹಿಡಿಯುತ್ತಿದ್ದಾಗ ತಮ್ಮ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದರು ಎಂದು ದೂರು ಸಲ್ಲಿಸಿದ್ದು, ಮರು ಮತದಾನಕ್ಕೆ ಒತ್ತಾಯಿಸಿ ಗ್ರಾಮದ ರಸ್ತೆಯಲ್ಲೇ ಧರಣಿ ಕುಳಿದರು.
ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗ್ರವಾಲ್  ಸ್ಥಳಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
 ದೂರು ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದರಾದರೂ ಸಂಜೆವರೆಗೆ ಪ್ರತಿಭಟನೆ ಮುಂದುವರೆಯಿತು.   ರಾಮನಗರ ಜಿಲ್ಲೆ ಮಾತ್ರವಲ್ಲದೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಪೊಲೀಸರೆದುರೇ ಕಾಂಗ್ರೆಸ್ಮ್‌ತ್ತು ಜೆಡಿಎಸ್ಕಾರ್ಯಕರ್ತರು ಮತದಾರರಿಗೆ ಹಣ ಹಂಚಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಮರು ಮತದಾನ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಎತ್ತಿ ಹಿಡಿಯಬೇಕು ಎನ್ನುವುದು ಆಪ್ ಪಡೆಯ ಒತ್ತಾಯವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement