ಕುಡಿಯುವ ನೀರಿನ ಸಮಸ್ಯೆಗೆ ಕ್ರಮ
ಮಾಗಡಿ: ಗ್ರಾಮೀಣ ಪ್ರದೇಶದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಜನತೆ ಕುಡಿವ ನೀರಿನ ಹಾಹಾಕಾರ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯ್ತಿ ವತಿಯಿಂದ ಸಮಸ್ಯೆ ನಿವಾರಣೆಗೆ ಅಗತ್ಯ ಕೊಳವೆ ಬಾವಿ ಕೊರೆಸಲಾಗಿದೆ ಎಂದು ಕುದೂರು ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಟಿ.ಹನುಮಂತರಾಯಪ್ಪ ತಿಳಿಸಿದರು.
ಇಲ್ಲಿಗೆ ಸಮೀಪದ ನವಗ್ರಾಮಕ್ಕೆ ಜಿಲ್ಲಾ ಪಂಚಾಯ್ತಿ ವತಿಯಿಂದ ಮಂಜೂರಾಗಿರುವ ಕೊಳವೆ ಬಾವಿ ಕೊರೆಯಲು ಚಾಲನೆ ನೀಡಿ ಮಾತನಾಡಿದ ಅವರು, ಕಳೆದ ಮೂರು ತಿಂಗಳಿನಿಂದ ಕುಡಿವ ನೀರಿನ ಸಮಸ್ಯೆ ಇರುವೆಡೆ ಈಗಾಗಲೇ ನಾಲ್ಕು ಕೊಳವೆ ಬಾವಿಗಳನ್ನು ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಅಗತ್ಯ ಕ್ರಮವಹಿಸಿರುವುದಾಗಿ ತಿಳಿಸಿದರು. ವಿಎಸ್ಎಸ್ಎನ್ ಅಧ್ಯಕ್ಷ ಆನಂದ್, ಮಸೂದ್, ಕಿಟ್ಟಿ, ಬಾಲರಾಜು, ನಾಗರಾಜು, ಮುನೀರ್ ಇತರರು ಇದ್ದರು.