ದ್ವಿಚಕ್ರ ವಾಹನ ಕಂಬಕ್ಕೆ ಡಿಕ್ಕಿ: ಯುವಕ ಸಾವು
ಕನಕಪುರ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನೊಬ್ಬ ರಸ್ತೆಬದಿಯ ಲೈಟ್ ಕಂಬಕ್ಕೆ ಡಿಕ್ಕಿಹೊಡೆದ ಕಾರಣ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ದುನ್ನಸಂದ್ರ ಗ್ರಾಮದ ಅನಿಲ್ ಕುಮಾರ್ (21) ಬಿನ್ ವೀರಭದ್ರೇಗೌಡ ಎಂದು ಗುರುತಿಸಲಾಗಿದೆ.
ಕಳೆದ ರಾತ್ರಿ ಕನಕಪುರದಿಂದ ಜೋಗಮಾನ ಹೊಸಹಳ್ಳಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಅನಿಲ್, ಎದುರುಗಡೆಯಿಂದ ಬರುತ್ತಿದ್ದ ಆಟೋವನ್ನು ತಪ್ಪಿಸಲು ಹೋಗಿ ರಸ್ತೆಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಜೊತೆಯಲ್ಲಿದ್ದ ಈತನ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕನಕಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.