ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಪಿಡಿಒ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

Rashmi Kasaragodu
Updated On : 2 Aug 2014, 12:41 pm

ಹೊಸಕೋಟೆ:  ತಾಲೂಕಿನ ಶಿವನಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇಲೆ ಕಾಂಗ್ರೆಸ್ ಮುಖಂಡರು  ನಡೆಸಿದ ಹಲ್ಲೆ ಖಂಡಿಸಿ 26 ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ತಾಲೂಕು ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದರು.
ಇದಕ್ಕೂ ಮುನ್ನ ಕೆಲ ಸಮಯ ಪೊಲೀಸ್ ಠಾಣೆ ಮುಂಭಾಗ ಧರಣಿ ನಡೆಸಿ ಅರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು. ನಂತರ ಮೆರವಣಿಗೆಯಲ್ಲಿ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಮತ್ತು ನೌಕರರ ಸಂಘದ ಅಧ್ಯಕ್ಷ ಅಂಕುಗೌಡ ಮಾತನಾಡಿ ವಿನಾಕಾರಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸುವುದು ಸಾಮಾನ್ಯವಾಗುತ್ತಿದೆ. ಶಿವನಾಪುರದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿವೆಂಕರಟಸ್ವಾಮಿ ಮೇಲೆ ಕಳೆದ ನಾಲ್ಕತು ತಿಂಗಳ ಅವಧಿಯಲ್ಲಿ 2-3 ಬಾರಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಲ್ಲಪ್ಪ ಮತ್ತು ಇವರ ಮಗ ಚಿಕ್ಕಪ್ಪಯ್ಯ ಎಂಬುವರು ಅನಾವಶ್ಯಕಗವಾಗಿ ಜಗಳ ಮಾಡಿ ಪ್ರಾಣ ಬೆದರಿಕೆ ಹಾಕಿದ್ದಾರೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಯಾವುದೇ ರಕ್ಷಣೆಯಿಲ್ಲದೆ ಭಯದ ವಾತಾವರಣದಲ್ಲಿ ಕಾರ್ಯನಿರ್ವಹಿಸಬೇಕಾದ ಅನಿವಾರ್ಯ ಪರಿಸ್ಥತಿ ಉಂಟಾಗಿದೆ.ಇದರಿಂದ ಸಿಬ್ಬಂದಿ ಭೀತಿಗೊಳಪಟ್ಟಿದ್ದು ಆತ್ಮಸ್ಥೈರ್ಯ ಕಳೆದುಕೊಳ್ಳುತ್ತಿದ್ದಾರೆ. ಕೃತ್ಯ ಎಸಗಿರುವ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಹಾಗೂ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಬಗ್ಗೆ ನಿರ್ದಿಷ್ಟ ಭರವಸೆ ದೊರಕುವವರೆಗೂ ಕರ್ತವ್ಯ ನಿರ್ವಹಿಸದೆ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿವೆ ಎಂದು ಎಚ್ಚರಿಸಿದರು. ಸ್ಥಳಕ್ಕೆ ಭೇಟಿ ನೀಡಿದ್ದ ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ ಕೋಡಿಪಾಳ್ಯ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ನಾರಾಯಣಸ್ವಾಮಿ, ಉಪಾಧ್ಯಕ್ಷೆ ಭಾಗ್ಯಮ್ಮ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಡಿ.ಟಿ.ವೆಂಕಟೇಶ್ ಅವರಿಗೂ ಮನವಿ ಪತ್ರ ಸಲ್ಲಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement