ವಿದ್ಯುತ್ ತಂತಿ ತಗುಲಿ ಇಬ್ಬರು ಸಾವು
ನೆಲಮಂಗಲ: ಕಾಡು ಹಂದಿಗಳ ಕಾಟದಿಂದ ಬೆಳೆ ರಕ್ಷಣೆಗೆಂದು ತೋಟಕ್ಕೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ತ್ಯಾಮಗೊಂಡ್ಲು ಸಮೀಪದ ದೊಡ್ಡಬೆಲೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ತೋಟದ ಮಾಲೀಕ ರಾಮಣ್ಣ (55) ಹಾಗೂ ಸ್ಥಳೀಯ ಶಾಂತಮ್ಮ(35) ಮೃತರು. ಬೆಳಗ್ಗೆ ಬರ್ಹಿದಸೆಗೆಂದು ಶಾಂತಮ್ಮ ಹೋದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ನಂತರ ಘಟನೆ ನೋಡಿದ ಮಾಲೀಕ ರಾಮಣ್ಣ ವಿದ್ಯುತ್ ತಂತಿ ತೆಗೆಯಲು ಹೋದಾಗ ಅವರಿಗೂ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದ್ದಾರೆ. ಈ ಬಗ್ಗೆ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.