ಬೆಂಗಳೂರು ಗ್ರಾಮಾಂತರ

ಪಿಡಿಒ, ಎಇಇ ಅಮಾನತು ರದ್ದುಗೊಳಿಸಿ: ಶಾಸಕರಿಗೆ ಮನವಿ

ಮಾಗಡಿ: ಪಿಡಿಒ ಮತ್ತು ಎಇಇ ಅವರನ್ನು ಸರ್ಕಾರ ಅಮಾನುಗೊಳಿಸಿರುವುದನ್ನು ಖಂಡಿಸಿ ತಾಲೂಕಿನ ಪಿಡಿಓಗಳ ನಿಯೋಗ ಶಾಸಕರನ್ನು ಭೇಟಿ ಅವರ ಅಮಾನತನ್ನು ರದ್ದುಪಡಿಸುವಂತೆ ಆಗ್ರಹಿಸಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರಲ್ಲಿ ಮನವಿ ಸಲ್ಲಿಸಿದರು.
ಇದೇ ವೇಳೆ ಹುಲೀಕಲ್ ಪಿಡಿಒ ವೆಂಕಟೇಶ್ ಮಾತನಾಡಿ ಖಾಸಗಿ ಜಮೀನಿನಲ್ಲಿ ಕೊರೆದಿರುವ ಕೊಳವೆ ಬಾವಿ ಕೊರೆದಿರುವುದು, ಅದು ನಿರುಪಯುಕ್ತ ಎಂದು ಪಿಡಿಒ ಗಮನಕ್ಕೆ ಬಂದಿರುವುದಿಲ್ಲ. ಹೇಗೆ ಪಿಡಿಒಗಳು ನಿರುಪಯುಕ್ತ ಕೊಳವೆ ಬಾವಿ ಎಂದು ತಿಳಿದು ಮುಚ್ಚಿಸಲು ಸಾಧ್ಯ. ಕೇವಲ ಪಿಡಿಒ ಮತ್ತು ಎಇಇ ಅವರನ್ನು ಹೊಣೆಗಾರರನ್ನಾಗಿ ಮಾಡಿ ಅಮಾನುತುಗೊಳಿಸಿರುವುದು ಸರಿಯಾದ ಕ್ರಮವಲ್ಲ. ಸರ್ಕಾರ ಕೂಡಲೆ ಅವರ ಅಮಾನತನ್ನು ರದ್ದುಗೊಳಿಸಿ ಕರ್ತವ್ಯಕ್ಕೆ  ನಿಯೋಜಿಸುವಂತೆ ಮನವಿ ಮಾಡಿ ದರು. ಮನವಿ ಸ್ವೀಕರಿಸಿದ ಶಾಸಕ ಎಚ್.ಸಿ. ಬಾಲಕೃಷ್ಣ, ಪಿಡಿಒ ಮತ್ತು ಎಇಇ ಅವರ ಅಮಾನುತು ಸಂಬಂಧ ಸಚಿವರಲ್ಲಿ ಚರ್ಚಿಸಿ, ಸಮಸ್ಯೆ ಬಗೆಹರಿಸುವಂತೆ  ಕೋರುವುದಾಗಿ ಪಿಡಿಒಗಳ ಮನವೊಲಿಸಿದರು.
ತಾ.ಪಂ. ಅಧ್ಯಕ್ಷೆ ಅನುಸೂಯಮ್ಮ ಮರಿಗೌಡ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜು, ತಹಸೀಲ್ದಾರ್ ಶಿವಕುಮಾರ್ ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಬಿ. ರಂಗೇಗೌಡ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾಕ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಆತ್ಮಾಹುತಿ ದಾಳಿ: ಭಾರತೀಯ ಪ್ರಜೆ ಸಾವು

20 ವರ್ಷಗಳಿಂದ ಆತನನ್ನು ಕೊಲ್ಲಲು ಬಯಸಿದ್ದೆ: ಫಾರೂಕ್ ಅಬ್ದುಲ್ಲಾ ಮೇಲೆ ದಾಳಿ ನಡೆಸಿದ ಶೂಟರ್ ಹೇಳಿಕೆ!

ಮೊಟ್ಟೆ ಪ್ರಿಯರಿಗೆ ಗುಡ್‌ ನ್ಯೂಸ್‌; ಬೆಲೆಯಲ್ಲಿ ಭಾರೀ ಇಳಿಕೆ, ಗ್ರಾಹಕರು ಸಂತಸ

ಜಮ್ಮು: ಫಾರೂಕ್‌ ಅಬ್ದುಲ್ಲಾ ಹತ್ಯೆಗೆ ಯತ್ನ, ಮದುವೆ ಮನೆಯಲ್ಲೇ ಗುಂಡಿನ ದಾಳಿ; ಡಿಸಿಎಂಗೆ ಗಾಯ

CM ಕುರ್ಚಿ ಕಸರತ್ತು: ಬಜೆಟ್ ಅಧಿವೇಶನ ಪೂರ್ಣಗೊಂಡ ಬಳಿಕ ನಾಯಕತ್ವ ಗೊಂದಲಕ್ಕೆ ‘ಹೈ’ ಪರಿಹಾರ..?

SCROLL FOR NEXT