ಬೆಂಗಳೂರು: ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳ ಗೆಲವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಜನರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇದು ಪಕ್ಷದ ಗೆಲವಿಗೆ ಪೂರಕವಾಗಿದೆ ಎಂದು ವಿಶ್ಲೇಷಿಸಿದರು. ಉಪಚುನಾವಣೆ ಎದುರಿಸುತ್ತಿರುವ 3 ವಿಧಾನಸಭೆ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸೂಚಿಸಿದ್ದಾರೆ ಎಂದರು.