ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಉಪನ್ಯಾಸಕರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Rashmi Kasaragodu
Updated On : 2 Feb 2014, 1:26 am

ಸೂಲಿಬೆಲೆ: ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನ ಸಿಟಿ ರೇಲ್ವೆ ನಿಲ್ದಾಣದಿಂದ ಮುಖ್ಯಮಂತ್ರಿಗಳ ಮನೆ ಕಡೆ ಹೊರಟಿದ್ದ ಅತಿಥಿ ಉಪನ್ಯಾಸಕರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಖಂಡಿಸಿ ಸೂಲಿಬೆಲೆಯಲ್ಲಿ ಡಿವೈಎಫ್ಐ ಹಾಗೂ ಎಸ್ಎಫ್ಐ ಸಂಘಟನೆಗಳು ಪ್ರತಿಭಟನೆ ರ್ಯಾಲಿ ನಡೆಸಿದವು.
ವಿಜಯಪುರ ರಸ್ತೆಯಲ್ಲಿರುವ ಸರ್ಕಾರಿ ಪದವಿ ಕಾಲೇಜಿನಿಂದ ಹೊರಟ ಸಂಘಟನೆಯ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಜನತಾ ಕಾಲೋನಿ, ಹಳೇ ಬಸ್ ನಿಲ್ದಾಣದ ಮೂಲಕ ಸಾಗಿ ನಾಡಕಚೇರಿಯವರೆಗೆ ಸರ್ಕಾರದ ವಿರುದ್ಧ ಘೋಷಣಿಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ವೇಳೆಯಲ್ಲಿ ಮಾತನಾಡಿದ ತಾಲೂಕು ಡಿವೈಎಫ್ಐ ಕಾರ್ಯದರ್ಶಿ ನರಸಿಂಹಮೂರ್ತಿ, ಪೊಲೀಸರು ಅತಿಥಿ ಉಪನ್ಯಾಸಕರ ಮೇಲೆ ಲಾಠಿ ಚಾರ್ಜು ಮಾಡಿ ದೌರ್ಜನ್ಯ ಮಾಡಿರುವುದು ಖಂಡನೀಯ. ಹಕ್ಕುಗಳನ್ನು ಹತ್ತಿಕ್ಕುವ ಉದ್ದೇಶದಿಂದ ಸರ್ಕಾರದ ಈ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಉಪನ್ಯಾಸಕರ ಬೇಡಿಕೆಗಳನ್ನು ಕೂಡಲೇ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಹಾಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವವರನ್ನೇ ಮುಂದಿನ ಸಾಲಿಗೆ ಮುಂದುವರೆಸಬೇಕು. ಬೇರೆ ರಾಜ್ಯಗಳಲ್ಲಿರುವಂತೆ ಸೇವಾ ಭದ್ರತೆಯನ್ನು ಒದಗಿಸಬೇಕು. ಉಪನ್ಯಾಸಕರ ಮೇಲೆ ಹಾಕಿರುವ ಸುಳ್ಳು ಕೇಸುಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. ಗ್ರಾಮಲೆಕ್ಕಿಗ ಸುಜ್ಞಾನ ಮೂರ್ತಿ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಮುಖಂಡರಾದ ಶಿವಕುಮಾರ್, ಮುನೇಂದ್ರ, ಅನಿಲ್, ಕೇಶವ್, ಸಾಧಿಕ್ ಪಾಷ ಮೊದಲಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement