ಕಾರು - ಬಸ್ ಡಿಕ್ಕಿ: ಮೂವರ ಸಾವು
ರಾಮನಗರ: ಇಂಡಿಕಾ ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿ, ಮತ್ತೊಬ್ಬ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟ ಘಟನೆ ಮಾಗಡಿ ತಾಲೂಕಿನ ತಾವರೆಕೆರೆ ಮಾರೇನಹಳ್ಳಿ ಸಮೀಪದ ಮಾಗಡಿ-ಬೆಂಗಳೂರು ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಇನ್ನು ಮೂವರಿಗೆ ತೀವ್ರ ಗಾಯವಾಗಿದೆ. ಮೃತರನ್ನು ಬೆಂಗಳೂರಿನ ತಾವರೆಕೆರೆ ನಿವಾಸಿಗಳು ಎಂದು ಗುರುತಿಸಲಾಗಿದ್ದು ಪಿಕ್ನಿಕ್ಗೆಂದು ಮಾಗಡಿ ಕಡೆಗೆ ಬಂದಿದ್ದವರು ಬೆಂಗಳೂರಿಗೆ ಹಿಂದಿರುಗುವಾಗ ಈ ಘಟನೆ ಸಂಭವಿಸಿದೆ. ಗಾಯಗೊಂಡಿರುವವರನ್ನು ತಾವರೆಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.