ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಉತ್ತಮ ಆರೋಗ್ಯ ಸಮಾಜ ನಿರ್ಮಿಸುವ ಹೊಣೆ ಎಲ್ಲರ ಮೇಲಿದೆ

Rashmi Kasaragodu
Updated On : 4 Feb 2014, 1:47 am

ನೆಲಮಂಗಲ: ಗ್ರಾಮೀಣ ಜನತೆಗೆ ಆರೋಗ್ಯದ ಅರಿವು ಮೂಡಿಸಿ ಉತ್ತಮ ಆರೋಗ್ಯ ಸಮಾಜ ನಿರ್ಮಿಸುವ ಹೊಣೆ ನಮ್ಮೆಲ್ಲರದಾಗಿದೆ ಎಂದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಡಿ.ಎಂ. ಪದ್ಮನಾಭ್ ತಿಳಿಸಿದರು. ಅವರು ಸೋಮವಾರ  ಅರಿಶಿನಕುಂಟೆ ಪಂಚಾಯ್ತಿ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಮ್ತಾ ಹೆಲ್ತ್ ಇನ್ಸ್ಟಿಟ್ಯೂಟ್ ಫಾರ್ ಮದರ್ ಅಂಡ್ ಚೈಲ್ಡ್ ಸಂಸ್ಥೆಯ ಯುವ ಜನ ಮಾಹಿತಿ ಕೇಂದ್ರ ವತಿಯಿಂದ ಉಚಿತ ಆರೋಗ್ಯ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಲ್ಡ್ಡಿದರು. ಮಕ್ಕಳಲ್ಲಿ ಆರೋಗ್ಯದಲ್ಲಿ ಆಗುವ ಬದಲಾವಣೆಗಳು ಹಾಗೂ ಕ್ರೀಡೆಗಳಲ್ಲಿ ಯುವಕರು ಭಾಗವಹಿಸುವುದರಿಂದ ದೇಹದ ಬೆಳವಣಿಗೆಗಾಗುವ ಉಪಯೋಗಗಳನ್ನು ಹೇಳಿದರು. ಸಂಸ್ಥೆ ಆರೋಗ್ಯ ಸಹಾಯಕಿ ಶೋಭಾ, ತಾಲೂಕು ಕ.ಸಾ.ಪ ಅಧ್ಯಕ್ಷ ಎನ್.ರಾಜಶೇಖರ್ ಸೇರಿದಂತೆ ಶಾಲಾ ಮಕ್ಕಳು ಇದ್ದರು.
ಆರೋಗ್ಯ ಸಹಾಯಕರ ನೇಮಕಕ್ಕೆ 6ರಂದು ಪ್ರತಿಭಟನೆ
ಬೆಂಗಳೂರು: ಕಳೆದ 5 ವರ್ಷಗಳಿಂದ ಬ್ಯಾಕ್ಲಾಗ್ ಹುದ್ದೆ ಬಿಟ್ಟು ಉಳಿದಂತೆ ಯಾವುದೇ ಕಿರಿಯ ಪುರುಷ ಆರೋಗ್ಯ ಸಹಾಯಕರನ್ನು ಸರ್ಕಾರ ನೇಮಕ ಮಾಡಿಕೊಂಡಿಲ್ಲ. ತರಬೇತಿ ಪಡೆದುಕೊಂಡವರೆಲ್ಲರೂ ನಿರುದ್ಯೋಗಿಗಳಾಗಿಯೇ ಇದ್ದಾರೆ ಎಂದು ಮೈಸೂರಿನ ಲೋಕೇಶ್ ಹೇಳಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ವಿಷಯವಾಗಿ ಹಲವಾರು ಬಾರಿ ಆರೋಗ್ಯ ಸಚಿವರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಫೆ.6ರಂದು ನಗರದ ಸ್ವಾತಂತ್ರ್ಯ ಉದ್ಯಾನದ ಮುಂದೆ ಪ್ರತಿಭಟನೆ ಮಾಡುವುದರ ಮೂಲಕ ಗಮನ ಸೆಳೆಯಲಾಗುವುದು ಎಂದು ಹೇಳಿದರು. ರಾಜ್ಯದಲ್ಲಿ 2,500 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು 8871 ಉಪ ಕೇಂದ್ರಗಳಿವೆ. ಒಟ್ಟು 8871 ಹುದ್ದೆಗಳು ಮಂಜೂರಾಗಿದ್ದರೂ ಕೇವಲ 3185 ಆರೋಗ್ಯ ಸಹಾಯಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. 2642 ಹುದ್ದೆಗಳು ಖಾಲಿ ಇದ್ದು ಅದನ್ನು ಶೀಘ್ರ ಭರ್ತಿ ಮಾಡಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದರು. ವಿವರಗಳಿಗೆ ಲೋಕೇಶ್- 8147810206 ಸಂಪರ್ಕಿಸಿ.
1.5ಕೋಟಿ ಮೌಲ್ಯದ ಆಸ್ತಿ ಬಿಡಿಎ ವಶ
ಬೆಂಗಳೂರು:  ಅನಧಿಕೃತ ಕಟ್ಟಡಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಬಿಡಿಎ ಸೋಮವಾರ ಹೆಣ್ಣೂರಿನಲ್ಲಿ 1.5ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡಿದೆ. ಹೆಣ್ಣೂರು ಗ್ರಾಮದ ಸರ್ವೆ ನಂಬರ್ 36/1ರಲ್ಲಿ ಅನಧಿಕೃತವಾಗಿ ಶೆಡ್ಗಳನ್ನು ನಿರ್ಮಿಸಲಾಗಿತ್ತು. ಈ ಮೂಲಕ 2700 ಚ.ಅಡಿ ಪ್ರದೇಶವನ್ನು ಆಕ್ರಮಿಸಿಕೊಳ್ಳಲಾಗಿತ್ತು. ಕಾರ್ಯಾಚರಣೆ ನಡೆಸಿದ ಬಿಡಿಎ ಅಧಿಕಾರಿಗಳು ಅನಧಿಕೃತ ಶೆಡ್ಗಳನ್ನು ತೆರವುಗೊಳಿಸಿದರು, ಅದನ್ನು ವಶಕ್ಕೆ ತೆಗೆದುಕೊಂಡರು ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement