ತಲಘಟ್ಟಪುರ ಸಬ್ ಇನ್ಸ್ಪೆಕ್ಟರ್ ವಿಶ್ವನಾಥ್ ಅಮಾನತು
ರಾಮನಗರ: ಕಗ್ಗಲೀಪುರ ರೌಡಿಗಳ ಕಾಳಗದ ಹಿನ್ನೆಲೆಯಲ್ಲಿ ತಲಘಟ್ಟಪುರ ಸಬ್ ಇನ್ಸ್ಪೆಕ್ಟರ್ ವಿಶ್ವನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.
ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎಂ.ಎನ್.ರೆಡ್ಡಿ ಸೂಚನೆ ಮೇರೆಗೆ ಅಮಾನತು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿರುವ ಅಗ್ರವಾಲ್, ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ರೌಡಿಗಳ ಉಪಟಳ ಸಂಬಂಧ ವಿಶ್ವನಾಥ್ಗೆ ಈಗಾಗಲೇ 2 ಬಾರಿ ಎಚ್ಚರಿಕೆ ನೀಡಲಾಗಿತ್ತು ಎಂದಿದ್ದಾರೆ.