ದಿವ್ಯಜ್ಞಾನಾನಂದಸ್ವಾಮೀಜಿ ಜನ್ಮದಿನಾಚರಣೆ
ದೊಡ್ಡಬಳ್ಳಾಪುರ: ಇಲ್ಲಿನ ತಪಸೀಹಳ್ಳಿಯ ಪುಷ್ಪಾಂಡಜ ಮುನಿ ಆಶ್ರಮದ ಶ್ರೀದಿವ್ಯಜ್ಞಾನಾನಂದಸ್ವಾಮೀಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಮಠದ ಭಕ್ತಾದಿಗಳಿಂದ ನಡೆಯಿತು. ದೇವನಹಳ್ಳಿ ಶಾಸಕ ಪಿಳ್ಳಮುನಿಶಾಮಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಜನರಲ್ಲಿ ಧಾರ್ಮಿಕ ಪ್ರಜ್ಞೆ ಕುಸಿಯುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ಬದ್ಧತೆಯನ್ನು ಪ್ರಚೋದಿಸುವ ನಿಟ್ಟಿನಲ್ಲಿ ಮಠ-ಮಾನ್ಯಗಳ ಪಾತ್ರ ದೊಡ್ಡದು ಎಂದರು. ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ವಿದ್ಯಾರ್ಥಿಗಳಿಂದ ವೇದ ಘೋಷ ಪಠಣ, ಭಜನೆ ನಡೆದವು. ಕೆ.ಎಂ.ಹನುಮಂತರಾಯಪ್ಪ, ಎಚ್.ಅಪ್ಪಯ್ಯಣ್ಣ, ಲಕ್ಷ್ಮೀನಾರಾಯಣ, ಪಿಳ್ಳಯ್ಯ, ವಸಂತ ಉದಯಗಿರಿ ಸೇರಿದಂತೆ ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳ ಗಣ್ಯರು ಭಾಗವಹಿಸಿದ್ದರು.